BELLARY VARTHE
ಶುಕ್ರವಾರ, ಮಾರ್ಚ್ 27, 2026
ಮಾ.28 ರಂದು ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಾ.28 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ 1ನೇ ಮಹಡಿಯ ಸಭಾಂಗಣದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆಯ ನೌಕರರಿಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ತೋರಣಗಲ್ಲು: ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ‘ಪ್ಯಾನ್-ಇಂಡಿಯಾ ರೆಸ್ಕೂö್ಯ ಮತ್ತು ರಿಹ್ಯಾಬಿಲಿಟೇಶನ್' ಅಭಿಯಾನದ ಅಂಗವಾಗಿ, ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ಶುಕ್ರವಾರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಾಲೂಕು ಟಾಸ್ಕ್ ಫೋರ್ಸ್ ಸಮಿತಿಯು ದಿಢೀರ್ ದಾಳಿ ನಡೆಸಿ ನಾಲ್ವರು ಮಕ್ಕಳನ್ನು ರಕ್ಷಿಸಿದೆ.
ಸಂಡೂರು ಗ್ರೇಡ್-2 ತಹಶೀಲ್ದಾರ್ ಸುಧಾರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತೋರಣಗಲ್ಲು ವ್ಯಾಪ್ತಿಯ ಹೊಸಪೇಟೆ ಮುಖ್ಯ ರಸ್ತೆ, ಬೈಪಾಸ್ ರಸ್ತೆ ಹಾಗೂ ರೈಲ್ವೇ ನಿಲ್ದಾಣದ ಸುತ್ತಮುತ್ತಲಿನ ವಿವಿಧ ಉದ್ದಿಮೆಗಳಾದ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ, ಫಾಸ್ಟ್ ಫುಡ್ ಸೆಂಟರ್ ಗಳು ಸೇರಿದಂತೆ ಮನೆ ನಿರ್ಮಾಣ ನಡೆಯುತ್ತಿದ್ದ ಸ್ಥಳಗಳಲ್ಲಿ ದಾಳಿ ನಡೆಸಿ ತಪಾಸಣೆ ಕೈಗೊಳ್ಳಲಾಯಿತು.
ಈ ವೇಳೆ ಕೆಲಸ ಮಾಡುತ್ತಿರುವುದು ಕಂಡುಬAದ 04 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಸಮಿತಿಯು ವಶಕ್ಕೆ ಪಡೆದು, ಅಧಿಕಾರಿಗಳು ಸ್ಥಳದಲ್ಲಿಯೇ ಮಕ್ಕಳ ಹೇಳಿಕೆಗಳನ್ನು ದಾಖಲಿಸಿಕೊಂಡು ನಂತರ ಅವರನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಒಪ್ಪಿಸಲಾಯಿತು.
ದಾಳಿಯ ಸಂದರ್ಭದಲ್ಲಿ ಉದ್ದಿಮೆಗಳ ಮಾಲೀಕರಿಗೆ ಬಾಲಕಾರ್ಮಿಕ ಪದ್ಧತಿಯ ದುಷ್ಟರಿಣಾಮ ಹಾಗೂ ಕಾನೂನು ಕ್ರಮಗಳ ಬಗ್ಗೆ ಎಚ್ಚರಿಕೆ ನೀಡಲಾಯಿತು. ಬಳಿಕ ಕರಪತ್ರ ಮತ್ತು ಪೋಸ್ಟರ್‌ಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಸಂಡೂರು ಕಾರ್ಮಿಕ ನಿರೀಕ್ಷಕ ಮಂಜುನಾಥ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ತೋರಣಗಲ್ಲು ಕಂದಾಯ ನಿರೀಕ್ಷಕರು, ಮಕ್ಕಳ ರಕ್ಷಣಾ ಘಟಕದ ಅರುಳ್, ಸಹಾಯವಾಣಿ ಸಿಬ್ಬಂದಿ ಕಾರ್ತಿಕ್, ರೀಚ್ ಸಂಸ್ಥೆಯ ಹನುಮಂತಪ್ಪ, ರೀಡ್ಸ್ ಸಂಸ್ಥೆಯ ಸಂಯೋಜಕ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
-----------
ಹೆಚ್ಚುತ್ತಿರುವ ಬಿಸಿಲಿನ ತಾಪ: ಸಾರ್ವಜನಿಕರು ಜಾಗೃತಿ ವಹಿಸಲು ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಮನವಿ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಪ್ರಸಕ್ತ ವರ್ಷ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಮನವಿ ಮಾಡಿದ್ದಾರೆ.
ಶಾಖಾಘಾತ ಹಾಗೂ ನಿರ್ಜಲೀಕರಣದಿಂದ ರಕ್ಷಿಸಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅವರು ತಿಳಿಸಿದ್ದಾರೆ.
*ಏನು ಮಾಡಬೇಕು?:*
ಮನೆಯಿಂದ ಹೊರಬರುವಾಗ ಸಡಿಲವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಗಾಳಿಯಾಡುವ ಪಾದರಕ್ಷೆಗಳನ್ನು ಬಳಸಬೇಕು. ಸದಾ ಕುಡಿಯುವ ನೀರನ್ನು ಜೊತೆಯಲ್ಲಿಟ್ಟುಕೊಳ್ಳಿ. ಬಾಯಾರಿಕೆಯಾಗದಿದ್ದರೂ ನಿಯಮಿತವಾಗಿ ನೀರು, ಮಜ್ಜಿಗೆ, ಎಳೆನೀರು ಅಥವಾ ಹಣ್ಣಿನ ರಸ ಸೇವಿಸಿ. ಓಆರ್‌ಎಸ್ ದ್ರಾವಣ ಬಳಸುವುದು ಉತ್ತಮ.
ಶುದ್ಧ ಹಾಗೂ ಮಸಾಲೆ ರಹಿತ ಆಹಾರಕ್ಕೆ ಆದ್ಯತೆ ನೀಡಿ. ಬೆರವನನ್ನು ಒರೆಸಲು ಮೆತ್ತನೆಯ ಕರವಸ್ತç ಅಥವಾ ಟಿಶ್ಯೂ ಬಳಸಬಹುದು ಎಂದು ಅವರು ತಿಳಿಸಿದ್ದಾರೆ.
*ಏನು ಮಾಡಬಾರದು?:*
ಅತಿಯಾದ ಕಾಫಿ, ಟೀ, ಕಾರ್ಬೋನೇಟೆಡ್ ಸಾಫ್ಟ್ ಡ್ರಿಂಕ್ಸ್ ಹಾಗೂ ಮದ್ಯಪಾನ ತ್ಯಜಿಸಬೇಕು. ಇವು ದೇಹದಲ್ಲಿನ ನೀರಿನಂಶವನ್ನು ಕಡಿಮೆ ಮಾಡುತ್ತವೆ. ರಸ್ತೆಬದಿಯ ತೆರೆದಿಟ್ಟ ಆಹಾರ, ಮಾಂಸಾಹಾರ ಹಾಗೂ ಅತಿಯಾದ ಮಸಾಲೆ ಪದಾರ್ಥಗಳನ್ನು ಸೇವಿಸಬಾರದು.
ಬಿಸಿಲಿನಿಂದ ಸುಸ್ತಾದಾಗ ತಕ್ಷಣವೇ ಅತಿ ತಣ್ಣಗಿನ ಐಸ್ ನೀರನ್ನು ಮೈಗೆ ಹಾಕಿಕೊಳ್ಳಬೇಡಿ. ಇದರಿಂದ ರಕ್ತನಾಳಗಳು ಸಂಕುಚಿತಗೊAಡು ದೇಹದ ಒಳಗಿನ ಉಷ್ಣತೆ ಏರಿಕೆಯಾಗಿ ಅಂಗಾAಗಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
*ಶಾಖಾಘಾತದ ಲಕ್ಷಣಗಳು ಮತ್ತು ಚಿಕಿತ್ಸೆ:*
ತೊದಲು ಮಾತು, ಅರೆಪ್ರಜ್ಞೆ, ಅತಿಯಾದ ದೇಹದ ಉಷ್ಣತೆ ಮತ್ತು ಉಸಿರಾಟದ ತೊಂದರೆ ಕಂಡುಬAದರೆ ಅದು ಶಾಖಾಘಾತದ ಲಕ್ಷಣಗಳಾಗಿವೆ. ಇಂತಹ ಸಂದರ್ಭದಲ್ಲಿ ತಕ್ಷಣ ವ್ಯಕ್ತಿಯನ್ನು ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಬೇಕು. ಕಾಲುಗಳನ್ನು ಸ್ವಲ್ಪ ಮೇಲಕ್ಕೆ ಎತ್ತಿ ಮಲಗಿಸಿ, ಬಟ್ಟೆಗಳನ್ನು ಸಡಿಲಗೊಳಿಸಬೇಕು. ಸಾಮಾನ್ಯ ನೀರಿನಿಂದ (ಐಸ್ ನೀರಲ್ಲ) ದೇಹವನ್ನು ಒರೆಸಿ ತಂಪು ಮಾಡಬೇಕು. ಸ್ಥಿತಿ ಗಂಭೀರವಾಗಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಅವರು ಹೇಳಿದ್ದಾರೆ.
*ವಾಂತಿ-ಬೇಧಿ ತಡೆಗಟ್ಟಲು ಕ್ರಮಗಳು:*
ಬೇಸಿಗೆಯಲ್ಲಿ ಕಲುಷಿತ ನೀರಿನಿಂದ ವಾಂತಿ-ಬೇಧಿ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಶುದ್ಧೀಕರಿಸಿದ ನೀರನ್ನೇ ಕುಡಿಯಬೇಕು. ಆಹಾರ ಸೇವಿಸುವ ಮುನ್ನ ಹಾಗೂ ಶೌಚದ ನಂತರ ಕೈಗಳನ್ನು ಸಾಬೂನಿನಿಂದ ಕನಿಷ್ಠ 45 ಸೆಕೆಂಡ್‌ಗಳ ಕಾಲ ತೊಳೆಯಬೇಕು. ಮನೆಯಲ್ಲಿ ತಯಾರಿಸಿದ ತಾಜಾ ಆಹಾರವನ್ನೇ ಸೇವಿಸಬೇಕು. ತುರ್ತು ಸಂದರ್ಭದಲ್ಲಿ ನೆರವಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 108 ಕ್ಕೆ ಕರೆ ಮಾಡಬಹುದು ಎಂದು ಡಾ.ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅಭಿಪ್ರಾಯ | ರಂಗಭೂಮಿ ಕಲೆ ಆಳವಾದ ಪ್ರಭಾವ ಬೀರುವಂತಹದ್ದು
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ರಂಗಭೂಮಿ ಒಂದು ಮುಕ್ತ ವಿಶ್ವವಿದ್ಯಾಲಯವಾಗಿದ್ದು, ರಂಗಭೂಮಿಗೆ ಅಳಿವಿಲ್ಲ. ಅದು ಕಲೆಗಳ ಸಾರವನ್ನು ಹೊಂದಿದೆ. ಜೀವನದ ಮೇಲೆ ಆಳವಾದ ಪ್ರಭಾವ ಬೀರುವಂತಹದ್ದಾಗಿದೆ ಎಂದು ಮೈಸೂರಿನ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅವರು ಹೇಳಿದರು.
ಶುಕ್ರವಾರ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಪ್ರದರ್ಶನ ಕಲೆ ಮತ್ತು ನಾಟಕ ವಿಭಾಗದ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ-2026 ಪ್ರಯುಕ್ತ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ರಂಗಭೂಮಿಯ ಉಳಿವಿನ ಸವಾಲುಗಳು” ಒಂದು ದಿನದ ರಾಷ್ಟಿçÃಯ ವಿಚಾರ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಶಾಂತಿ ಬಯಸುವುದು ರಂಗಭೂಮಿಯ ಮುಖ್ಯ ಧ್ಯೇಯವಾಗಿದೆ ಎಂದು ತಿಳಿಸಿದರು.
ಜೀವನದಲ್ಲಿ ಫೇಲಾದವರೆ ಮಹಾನ್ ವ್ಯಕ್ತಿಗಳಾಗಿದ್ದಾರೆ. ಪ್ರಶ್ನಿಸದೆ ಯಾವುದನ್ನು ಒಪ್ಪಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆದಿ ಕವಿ ಪಂಪ, ಅಲ್ಲಮಪ್ರಭು, ಬುದ್ಧ, ರಾಮ- ಸೀತೆ, ಅಕ್ಕಮಹಾದೇವಿ, ಬಸವಣ್ಣನವರ ಕುರಿತಾದ ವಿಚಾರಗಳನ್ನು ವ್ಯಕ್ತಪಡಿಸಿದರು.
ಧಾರವಾಡದ ಹಿರಿಯ ರಂಗಕರ್ಮಿ ಡಾ.ಶಶಿಧರ್ ನರೇಂದ್ರ ಅವರು ದಿಕ್ಸೂಚಿ ಭಾಷಣಕಾರರಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಳಕೆಗೆ ಪ್ರತಿಯೊಂದಕ್ಕೆ ಆಜ್ಞೆ ನೀಡಬೇಕಾಗುತ್ತದೆ. ಕೃತಕ ಬುದ್ಧಿಮತ್ತೆಯ ಯುಗದಲ್ಲಿ ರಂಗ ಪರಂಪರೆಯನ್ನು ಆಧುನಿಕತೆಗೆ ಒಳಪಡಿಸುವ ಕ್ರಮವಾಗಿದೆ ಎಂದು ಹೇಳಿದರು.
ಎಐ ಬರವಣಿಗೆಯ ಹಕ್ಕುಗಳಿಗೆ ಸಾಮ್ಯತೆ ಕೊಡುವುದು ಪ್ರಶ್ನೆಯಾಗಿ ಉಳಿದಿದೆ. ಎಐ ತಂತ್ರಜ್ಞಾನ ಬಳಸುವಲ್ಲಿ ಉಪಾಯ ಅಪಾಯಗಳೆರಡು ಇವೆ ಎಂದು ತಿಳಿಸಿದ ಅವರು, ‘ಗೌಹರ್ ಜಾನ್’ ಕೃತಿಯನ್ನು ಎಐ ನಿಂದ ಭಾಷಾಂತರವಾಗಿದ್ದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಪ್ರೊ.ಎಂ ಮುನಿರಾಜು ಅವರು ಮಾತನಾಡಿ, ಒತ್ತಡದ ಜೀವನದಲ್ಲಿ ನಾಟಕಗಳು ತುಂಬಾ ಪ್ರಭಾವ ಬೀರುತ್ತವೆ. ಕಲಾವಿದರು ಹಲವಾರು ವರ್ಷಗಳ ಶ್ರಮದಿಂದ ಪ್ರತಿಭೆಗೆ ಪಾತ್ರರಾಗುತ್ತಾರೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳನ್ನು ಹೊರತುಪಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಒತ್ತಡವನ್ನು ಹೋಗಲಾಡಿಸಬಹುದು ಎಂದು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಸಂಶೋಧನಾ ಲೇಖನಗಳ ಸಾರಾಂಶಗಳ ಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿದರು. ವಿಶ್ವ ರಂಗಭೂಮಿ ಸಂದೇಶವನ್ನು ಡಾ.ಅಣ್ಣಾಜಿ ಕೃಷ್ಣಾರೆಡ್ಡಿ ಓದಿದರು.
ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎನ್.ಎಂ ಸಾಲಿ, ಕಲಾ ನಿಕಾಯದ ಡೀನ್ ಪ್ರೊ.ರಾಬರ್ಟ್ ಜೋಸ್, ಕಿರುತೆರೆ ಮತ್ತು ಹಿರಿತರೆ ಕಲಾವಿದರಾದ ಲಕ್ಷಿö್ಮÃ ನಾಡಗೌಡ್ ವೇದಿಕೆಯಲ್ಲಿದ್ದರು.
ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಂಶೋಧನಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಜರಿದ್ದರು.
ವಿಚಾರ ಸಂಕಿರಣದ ಸಂಚಾಲಕ ಪ್ರೊ.ಎನ್.ಶಾಂತನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಡಾ.ಕೆ.ಎಸ್ ಶಿವಪ್ರಕಾಶ ನಿರೂಪಿಸಿದರು. ಕನ್ನಡ ಅಧ್ಯಯನ ವಿಭಾಗದ ಸಂಯೋಜಕ ಡಾ.ಸಂತೋಷ ಜಿ.ಕೆ ವಂದಿಸಿದರು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
------------
ಕುರೇಕುಪ್ಪ ಪುರಸಭೆ: ಶೇ.03 ರಷ್ಟು ಆಸ್ತಿ ತೆರಿಗೆ ಹೆಚ್ಚಳ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಪೌರಾಡಳಿತ ನಿರ್ದೇಶನಾಲಯದ ಆದೇಶ ಹಾಗೂ ಕುರೇಕುಪ್ಪ ಪುರಸಭೆಯ ಸಾಮಾನ್ಯ ಸಭೆಯ ತೀರ್ಮಾನದಂತೆ ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಅನ್ವಯವಾಗುವಂತೆ ಆಸ್ತಿ ತೆರಿಗೆಯನ್ನು ಶೇ.03 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.
2025-27ನೇ ಆರ್ಥಿಕ ಸಾಲಿನಲ್ಲಿ ಮಾರುಕಟ್ಟೆ ದರಸೂಚಿಗಳು ಪರಿಷ್ಕರಣೆಯಾಗದಿದ್ದ ಪಕ್ಷದಲ್ಲಿ, ಆಸ್ತಿ ತೆರಿಗೆಯನ್ನು ಕನಿಷ್ಠ ಶೇ.03 ರಿಂದ ಶೇ.05 ರಷ್ಟು ಹೆಚ್ಚಿಸಲು ಸೂಚಿಸಲಾಗಿತ್ತು.
ಕುರೇಕುಪ್ಪ ಪುರಸಭೆಯ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಸಾರ್ವಜನಿಕರ ಹಿತದೃಷ್ಟಿಯಿಂದ ಕನಿಷ್ಠ ಪ್ರಮಾಣದ ಹೆಚ್ಚಳಕ್ಕೆ ಅಂದರೆ, ಶೇ.03 ರಷ್ಟು ತೆರಿಗೆಯನ್ನು ಹೆಚ್ಚುವರಿ ಮಾಡಲು ಸಭೆಯು ಅನುಮೋದನೆ ನೀಡಿದೆ.
ಹಾಗಾಗಿ 2026-27ನೇ ಸಾಲಿನಿಂದ ಜಾರಿಗೆ ಬರುವಂತೆ ಆಸ್ತಿ ತೆರಿಗೆ ದರದಲ್ಲಿ ಶೇ.03 ರಷ್ಟು ಪರಿಷ್ಕರಣೆ ಮಾಡಲಾಗಿದ್ದು, ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಆಸ್ತಿ ಮಾಲೀಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
-----------
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಕಂಪ್ಲಿ ತಾಲ್ಲೂಕಿನ ಅರಳ್ಳಿಹಳ್ಳಿ ತಾಂಡದ ಬಸ್ ನಿಲ್ದಾಣದ ಹತ್ತಿರದ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 55-60 ವರ್ಷದ ಅನಾಮಧೇಯ ವ್ಯಕ್ತಿಯನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಎಂಸಿಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಚಿಕಿತ್ಸೆಯಿಂದ ಗುಣಮುಖನಾಗದೇ ಮಾ.11 ರಂದು ಮೃತಪಟ್ಟಿದ್ದು, ಅನಾಮದೇಯ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ, ಈ ಕುರಿತು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ವಾರುಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ 4.3 ಅಡಿ, ತೆಳುವಾದ ಮೈಕಟ್ಟು ಮತ್ತು ಕಪ್ಪು ಮೈಬಣ್ಣ ಹೊಂದಿದ್ದು, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತ ಕೂದಲು, ಬಿಳಿ ಮೀಸೆ ಮತ್ತು ಗಡ್ಡ ಬಿಟ್ಟಿರುತ್ತಾನೆ.
ಕಡು ನೀಲಿ ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೃತ ವಾರಸುದಾರನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕಂಪ್ಲಿ ಪೊಲೀಸ್ ಠಾಣೆ ಪಿ.ಐ ಮೊ.8277977722, 9480803038, ತೋರಣಗಲ್ ಡಿ.ಎಸ್.ಪಿ ಮೊ.9480803010, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-------------
ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.31 ರಂದು ಬೆಳಿಗ್ಗೆ 11 ಗಂಟೆಗೆ ನಗರದ ತೇರು ಬೀದಿಯ ಶ್ರೀ ಪಾರ್ಶ್ವನಾಥ್ ಭವನದಲ್ಲಿ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಜೈನ್ ಸಂಘದ ಅಧ್ಯಕ್ಷ ಸುರಜ್ ಮಲ್ ಜೈನ್ ಸೇರಿದಂತೆ ಇತರರು ಭಾಗವಹಿಸುವರು.
ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಆಲಂಭಾಷ ಅವರು ಜಯಂತಿ ಕುರಿತು ವಿಶೇಷ ಉಪಪನ್ಯಾಸ ನೀಡುವರು. ಶ್ರೀ ಶಿರಡಿ ಸಾಯಿ ಸೇವಾ ಸತ್ಸಂಗ ಟ್ರಸ್ಟ್ ವತಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)


