BELLARY VARTHE
ಗುರುವಾರ, ಮೇ 14, 2026
ಹೆಲ್ಮೆಟ್ ಜಾಗೃತಿಗಾಗಿ ಬೈಕ್ ಸವಾರಿ ಮಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ | ಹೆಲ್ಮೆಟ್ ಧರಿಸುವುದು ಕಡ್ಡಾಯ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರ ಜೀವ ರಕ್ಷಣೆಗಾಗಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನಾಗರಿಕರ ಪ್ರಾಣ ರಕ್ಷಣೆಯು ಕಾನೂನಿನ ಮುಖ್ಯ ಉದ್ದೇಶವಾಗಿದ್ದು, ಸಾರ್ವಜನಿಕರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ, ಸಂಚಾರಿ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ, ಹೆಲ್ಮೆಟ್ ವಿತರಣೆ ಹಾಗೂ ಬೈಕ್ ರ‍್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾನೂನು ಎಂಬುದು ಸಾರ್ವಜನಿಕರ ಹಿತರಕ್ಷಣೆಗಾಗಿ ನಾವೇ ಮಾಡಿಕೊಂಡಿರುವುದು ಎಂಬ ಅರಿವು ಎಲ್ಲರಲ್ಲಿ ಇರಬೇಕು. ಹೆಲ್ಮೆಟ್ ಕಡ್ಡಾಯದಿಂದ ವಿನಾಯಿತಿ ನೀಡುವಂತೆ ಯಾರೂ ಮನವಿ ಮಾಡಬಾರದು. ವಿನಾಯಿತಿ ಕೇಳುವುದು ಎಂದರೆ ‘ಜನರ ಪ್ರಾಣ ರಕ್ಷಣೆ ಮಾಡಬೇಡಿ’ ಮತ್ತು ‘ಕುಟುಂಬದ ಬಗ್ಗೆ ಕಾಳಜಿ ಇಲ್ಲ’ ಎಂದು ಹೇಳಿದಂತೆ ಎಂದು ಅವರು ತಿಳಿಸಿದರು.
ಬಳ್ಳಾರಿಯ ಜನರು ಈಗಾಗಲೇ ಸಕಾಲ ಸೇವೆ ಮತ್ತು ಜನಗಣತಿ ಕಾರ್ಯಗಳಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನ ಪಡೆದು ತಮ್ಮ ಇಚ್ಛಾಶಕ್ತಿಯನ್ನು ಸಾಬೀತುಪಡಿಸಿದ್ದಾರೆ. ಅದೇ ರೀತಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಜಿಲ್ಲೆಯ ಹೆಸರನ್ನು ಎತ್ತಿಹಿಡಿಯಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಬೈಕ್ ಅಪಘಾತಗಳ ಅಂಕಿಅAಶಗಳು ಆತಂಕಕಾರಿಯಾಗಿದ್ದು, ಪ್ರತಿಯೊಬ್ಬ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಜೀವ ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯೊಂದರಲ್ಲೇ ಕಳೆದ ಮೂರು ವರ್ಷಗಳಲ್ಲಿ (2023 ರಿಂದ 2026ರ ಏಪ್ರಿಲ್ ವರೆಗೆ) ಬೈಕ್ ಅಪಘಾತಗಳಿಂದಾಗಿ ಒಟ್ಟು 462 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸರಾಸರಿ ಪ್ರತಿ ಎರಡು ದಿನಕ್ಕೆ ಒಂದು ಸಾವು ಬೈಕ್ ಅಪಘಾತದಿಂದ ಸಂಭವಿಸುತ್ತಿದೆ. ಅಂದರೆ ವರ್ಷಕ್ಕೆ ಸುಮಾರು 150ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಅಂಕಿ-ಅAಶ ವಿವರಿಸಿದರು.
ಸಂಚಾರ ನಿಯಮಗಳನ್ನು ಕೇವಲ ದಂಡ ಅಥವಾ ಪೊಲೀಸರ ಭಯಕ್ಕಾಗಿ ಪಾಲಿಸಬಾರದು. ನಮ್ಮ ಶಿರ (ತಲೆ) ಸುರಕ್ಷಿತವಾಗಿದ್ದರೆ ಮಾತ್ರ ದೇಹಕ್ಕೆ ಚೈತನ್ಯವಿರುತ್ತದೆ ಎಂಬುದು ಪ್ರತಿಯೊಬ್ಬರ ಮನವರಿಕೆಯಾಗಬೇಕು. ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಲು ಯಾವುದೇ ಜಿಲ್ಲೆಗಳಿಗೂ ಅವಕಾಶವಿಲ್ಲ. ಉರಿಬಿಸಿಲು ಅಥವಾ ಇತರ ಕಾರಣಗಳನ್ನು ನೀಡುವುದು ಸರಿಯಲ್ಲ, ಇದು ನಮ್ಮ ಮತ್ತು ನಮ್ಮ ಕುಟುಂಬದ ಸುರಕ್ಷತೆಗಾಗಿ ಮಾಡುವ ಸಣ್ಣ ಹೂಡಿಕೆಯಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಇಂದಿನ ಕಾಲದಲ್ಲಿ ಜನರು ತಾವು ಬಳಸುವ ಬೆಲೆಬಾಳುವ ಮೊಬೈಲ್ ಫೋನ್‌ಗಳಿಗೆ ನೀಡುವಷ್ಟೂ ಸುರಕ್ಷತೆಯನ್ನು ತಮ್ಮ ಜೀವಕ್ಕೆ ನೀಡುತ್ತಿಲ್ಲ ಎಂಬುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು.
ಮೊಬೈಲ್ ಕೆಳಗೆ ಬಿದ್ದರೆ ಸ್ಕಿçÃನ್ ಒಡೆಯಬಾರದು ಎಂದು ಸ್ಕಿçÃನ್ ಗಾರ್ಡ್ ಹಾಕಿಸುವ ನಾವು, ಅದಕ್ಕಿಂತಲೂ ಅಮೂಲ್ಯವಾದ ನಮ್ಮ ಮೆದುಳು ಮತ್ತು ಜೀವದ ರಕ್ಷಣೆಗೆ ಹೆಲ್ಮೆಟ್ ಧರಿಸಲು ನಿರ್ಲಕ್ಷö್ಯ ಮಾಡುತ್ತಿದ್ದೇವೆ. ನಾವು ಜೀವಂತವಾಗಿದ್ದರೆ ಮಾತ್ರ ಈ ಜಗತ್ತು ನಮಗೆ ಅಸ್ತಿತ್ವದಲ್ಲಿರುತ್ತದೆ. ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡರೆ ಅಥವಾ ಗಂಭೀರ ಗಾಯಗಳಾದರೆ ಆ ಕುಟುಂಬ ಅನುಭವಿಸುವ ನೋವು ಮತ್ತು ಸಂಕಷ್ಟಗಳು ಅಪಾರವಾಗಿದೆ ಎಂದರು.
ಬರುವ ಜೂನ್ 1 ರಿಂದ ಜಿಲ್ಲಾದ್ಯಂತ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು. ನಮ್ಮ ಕುಟುಂಬದವರ, ಸ್ನೇಹಿತರ ಮತ್ತು ನಮ್ಮವರ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಈ ನಿಯಮವನ್ನು ಪಾಲಿಸಿ, ಹೆಲ್ಮೆಟ್ ಧರಿಸುವ ಮೂಲಕ ಅಮೂಲ್ಯವಾದ ಜೀವಗಳನ್ನು ಉಳಿಸೋಣ ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸೆಖೆ ಅಥವಾ ಅಸ್ವಸ್ಥತೆಯ ಕಾರಣ ನೀಡಿ ಹೆಲ್ಮೆಟ್ ಧರಿಸುವುದನ್ನು ಕಡೆಗಣಿಸಬಾರದು. ಸ್ವಲ್ಪ ಸಮಯದ ಅನಾನುಕೂಲಕ್ಕಿಂತ ಪ್ರಾಣ ರಕ್ಷಣೆ ಮುಖ್ಯ. ನಿಮ್ಮ ಮತ್ತು ನಿಮ್ಮ ಕುಟುಂಬದ ಹಿತದೃಷ್ಟಿಯಿಂದ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಹೇಳಿದರು.
ಇದಕ್ಕೂ ಮುನ್ನ ಗಣ್ಯರು ‘ಹೆಲ್ಮೆಟ್ ಧರಿಸಿ- ಜೀವ ಉಳಿಸಿ’ ಎನ್ನುವ ಭಿತ್ತಿಪತ್ರಗಳನ್ನು ಅನಾವರಣಗೊಳಿಸಿದರು. ಬಳಿಕ ಪೌರಕಾರ್ಮಿಕರಿಗೆ, ಸಾರ್ವಜನಿಕರು ಒಳಗೊಂಡAತೆ 100 ಹೆಲ್ಮೆಟ್ ಗಳನ್ನು ವಿತರಿಸಲಾಯಿತು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಡಿಎಆರ್ ಡಿಎಸ್ಪಿ ತಿಪ್ಪೇಸ್ವಾಮಿ, ಬಳ್ಳಾರಿ ನಗರ ಡಿಎಸ್ಪಿ ಗೋವಿಂದರಾಜು, ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರುದ್ರಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಸೇರಿದಂತೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.
*ಆಕರ್ಷಕ ಬೈಕ್ ರ‍್ಯಾಲಿ:*
ಹೆಲ್ಮೆಟ್ ಜಾಗೃತಿ ಅಂಗವಾಗಿ ನಗರದಲ್ಲಿ ಆಕರ್ಷಕ ಬೈಕ್ ರ‍್ಯಾಲಿ ನಡೆಯಿತು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಜಾಗೃತಿ ಅಂಗವಾಗಿ ಸ್ವತಃ ತಾವೇ ಬೈಕ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು.
ರ‍್ಯಾಲಿಯು ಜಿಲ್ಲಾ ಪೊಲೀಸ್ ಕಚೇರಿಯಿಂದ ಪ್ರಾರಂಭಗೊAಡು - ದುರ್ಗಮ್ಮ ದೇವಸ್ಥಾನ ರೈಲ್ವೆ ಸೇತುವೆ ಕೆಳ ರಸ್ತೆ-ಯುಬಿ ಸರ್ಕಲ್-ಗಡಿಗಿ ಚೆನ್ನಪ್ಪ ವೃತ್ತ - ಬೆಂಗಳೂರು ರಸ್ತೆ- ತೇರುಬೀದಿ-ಹೆಚ್.ಆರ್. ಗವಿಯಪ್ಪ ವೃತ್ತ-ಅಂಬೇಡ್ಕರ್ ವೃತ್ತ-ಸುಧಾ ಕ್ರಾಸ್- ಇನ್‌ಪೆಂಟ್ರಿ ರಸ್ತೆ-ಎಸ್.ಪಿ ಸರ್ಕಲ್-ದುರ್ಗಮ್ಮ ದೇವಸ್ಥಾನ-ಕೆಇಬಿ ಸರ್ಕಲ್-ಬಸವೇಶ್ವರ ನಗರ-ಎಸ್.ಎನ್ ಪೇಟೆ ಮೇಲು ಸೇತುವೆ-ಕೂಲ್ ಕಾರ್ನರ್-ಡಿಎಆರ್ ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು.
--------
ಬಳ್ಳಾರಿ: ಮೇ 21 ರಂದು ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಮೇ 21 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
*ಅರ್ಹತೆ:*
ಫಿಟ್ಟರ್, ಟರ್ನರ್, ಎಲೆಕ್ಟಿçಷಿಯನ್, ವೆಲ್ಡರ್, ಇ.ಎಂ., ಎಂ.ಎA.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
*ಅಗತ್ಯವಿರುವ ದಾಖಲೆಗಳು:*
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೋನ್ ಅನ್ನು ತಪ್ಪದೇ ತರಬೇಕು.
ಸೂಚನೆ: ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಅಪರಿಚಿತ ವ್ಯಕ್ತಿ ಆತ್ಮಹತ್ಯೆ - ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ನಗರದ ರೈಲ್ವೇ ನಿಲ್ದಾಣದ ಸಮೀಪ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗಾಗಿ ಸಹಕರಿಸಬೇಕು.
ಮೇ 13 ರಂದು ತೋರಣಗಲ್ಲು ರೈಲ್ವೇ ನಿಲ್ದಾಣದ ಯಾರ್ಡ್ ಹತ್ತಿರದ ರೈಲ್ವೇ ಕಿ.ಮೀ ನಂ: 175/0 ಬಳಿ ಚಲಿಸುವ ರೈಲಿಗೆ ತಲೆಕೊಟ್ಟು ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
---------
ಬುಧವಾರ, ಮೇ 13, 2026
ಬಳ್ಳಾರಿ: ಹಸ್ತಪ್ರತಿಗಳ ಸಂರಕ್ಷಣೆಗೆ 'ಜ್ಞಾನ ಭಾರತಂ ಮಿಷನ್' ಚಾಲನೆ | ಸಾರ್ವಜನಿಕರ ಸಹಕಾರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕರೆ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಶತಮಾನಗಳ ಇತಿಹಾಸವಿರುವ ಭಾರತದ ಜ್ಞಾನ ಪರಂಪರೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ 'ಜ್ಞಾನ ಭಾರತಂ ಮಿಷನ್' ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಯೋಜನೆಯಡಿ ಜಿಲ್ಲೆಯಾದ್ಯಂತ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
*ಯೋಜನೆಯ ಉದ್ದೇಶ ಮತ್ತು ಕಾರ್ಯವೈಖರಿ:*
ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು 'ರಾಷ್ಟ್ರೀಯ ಹಸ್ತಪ್ರತಿ ಭಂಡಾರ' ನಿರ್ಮಿಸುವುದು ಈ ಮಿಷನ್‌ನ ಮುಖ್ಯ ಉದ್ದೇಶ. ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಇದರ ನೋಡೆಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿದೆ ಎಂದು ಅವರು ತಿಳಿಸಿದ್ದಾರೆ.
*ಜಿಲ್ಲಾ ಮಟ್ಟದ ಸಮಿತಿ ರಚನೆ:*
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಜಿಲ್ಲೆಯ ಮಠಗಳು, ದೇವಾಲಯಗಳು, ಗ್ರಂಥಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಪತ್ತೆಹಚ್ಚುವ ಜವಾಬ್ದಾರಿ ಹೊತ್ತಿದೆ. ಸಮೀಕ್ಷೆಯು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದ್ದು, ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಮತ್ತು ಮೆಟಾಡೇಟಾ ದಾಖಲೀಕರಣ ಮಾಡಲಾಗುತ್ತಿದೆ.
*ಗಮನಾರ್ಹ ಪ್ರಗತಿ:*
ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವು ವೇಗವಾಗಿ ನಡೆಯುತ್ತಿದ್ದು, 17 ಜಿಲ್ಲೆಗಳಲ್ಲಿ ಏ.27 ರ ವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿಯೂ ಸಮೀಕ್ಷಾ ಕಾರ್ಯವು ಪ್ರಗತಿಯಲ್ಲಿದೆ. ಈ ಸಮೀಕ್ಷಾ ಪ್ರಕ್ರಿಯೆಯು ಮೇ ರವರೆಗೆ ಅಂತ್ಯದವರೆಗೆ ಮುಂದುವರಿಯಲಿದೆ.
*ಸಾರ್ವಜನಿಕರಿಗೆ ಮನವಿ:*
ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾರ ಬಳಿಯಾದರೂ ಪ್ರಾಚೀನ ಹಸ್ತಪ್ರತಿಗಳು ಅಥವಾ ಬರವಣಿಗೆಯುಳ್ಳ ತಾಳೆಗರಿಗಳು ಲಭ್ಯವಿದ್ದಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ. ಮಾಹಿತಿ ನೀಡಲು ಇಚ್ಛಿಸುವವರು ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದು: ಡಾ. ಆರ್. ಮಂಜನಾಯ್ಕ್: ಪುರಾತತ್ವ ಸಹಾಯಕರು, ಕಮಲಾಪುರ (ಮೊ: 9945415518), ಶ್ರೀಹರಿ ಮಾಸನೂರು: ಪ್ರವಾಸಿ ಅಧಿಕಾರಿಗಳು, ಕಮಲಾಪುರ (ಮೊ:7892722443).
ನಮ್ಮ ಪೂರ್ವಜರ ಜ್ಞಾನದ ಕುರುಹುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ರಾಷ್ಟ್ರೀಯ ಕಾರ್ಯಕ್ಕೆ ಸಾರ್ವಜನಿಕರು ಮತ್ತು ಸಂಸ್ಥೆಗಳು ಹೆಚ್ಚಿನ ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
-----------
ಬಳ್ಳಾರಿ: ಮುಂದುವರೆದ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಜಿಲ್ಲೆಯ ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಬರುವ ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ಸಂರಕ್ಷಿಸುವ ಕಾರ್ಯ ಜಿಲ್ಲಾಡಳಿತದಿಂದ ಬುಧವಾರವೂ ಮುಂದುವರೆಯಿತು.
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಭುವನಗಿರಿ ಕಾಲೋನಿಯ ಅಶೋಕ್ ನಗರದ ಸರ್ವೆ ನಂಬರ್ 348 ರಲ್ಲಿನ ಒಟ್ಟು 11.59 ಎಕರೆ ಜಮೀನು ಕರ್ನಾಟಕ ಸರ್ಕಾರದ ಸ್ವತ್ತಾಗಿದ್ದು, ಬುಧವಾರ ಸ್ಥಳದಲ್ಲಿ ಜೆಸಿಬಿ ಯಂತ್ರಗಳ ಮೂಲಕ ಜಾಗವನ್ನು ಸಮತಟ್ಟುಗೊಳಿಸುವ ಮೂಲಕ ಗುರುತಿಸುವ ಕಾರ್ಯ ನಡೆಯಿತು.
ಒತ್ತುವರಿದಾರರಿಗೆ ಎಚ್ಚರಿಕೆ ನೀಡುವ ಫಲಕವನ್ನು ವಿವಾದಿತ ಸ್ಥಳದಲ್ಲಿ ಅಳವಡಿಸುವ ಮೂಲಕ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ನಾಮಫಲಕದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
*ಕಠಿಣ ಕಾನೂನು ಕ್ರಮದ ಎಚ್ಚರಿಕೆ:*
ಸರ್ಕಾರಿ ಜಮೀನುಗಳನ್ನು ಯಾರಾದರೂ ಒತ್ತುವರಿ ಮಾಡಿಕೊಂಡಲ್ಲಿ ಅಥವಾ ಅನಧಿಕೃತವಾಗಿ ಬಳಕೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಇಂತಹ ಜಾಗಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ತೆರವು ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಹಾಗೂ ಕಂದಾಯ, ಪೊಲೀಸ್ ಅಧಿಕಾರಿಗಳು ಇದ್ದರು.
-----------
ವ್ಯಕ್ತಿ ನಾಪತ್ತೆ - ಪತ್ತೆಗೆ ಮನವಿ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ನಗರದ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ವಟ್ಟಪ್ಪಗೇರಿಯ ನಿವಾಸಿ ಯೇಸುದಾಸ್ ಎನ್ನುವ 43 ವರ್ಷದ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದ್ದು, ಪತ್ತೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಘಟನೆಯ ವಿವರ:
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಜ್ಯೋತಿ ಎಂಬುವವರ ಪತಿ ಯೇಸುದಾಸ್ ಎಂಬುವವರು 2022ರ ಜ.02 ರಿಂದ ನಾಪತ್ತೆಯಾಗಿದ್ದಾರೆ. ದೂರಿನ ಅನ್ವಯ ತಾವು ಸಾಲ ಮಾಡಿಕೊಂಡಿರುವುದಾಗಿಯೂ ಮತ್ತು ಸಾಲಗಾರರು ಹಣ ಮರಳಿಸುವಂತೆ ಕೇಳುತ್ತಿದ್ದಾರೆ ಎಂದು ಪತ್ನಿಗೆ ತಿಳಿಸಿದ್ದರು. ಅಂದಿನಿAದ ಅವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ವ್ಯಕ್ತಿಯ ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ದುಂಡು ಮುಖ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೆಇಬಿ ಲೈನ್ ಮ್ಯಾನ್ ಕೆಲಸ ಮಾಡುತ್ತಿರುತ್ತಾನೆ. ಮನೆಯಿಂದ ಹೊರಡುವಾಗ ಯಾವ ಬಟ್ಟೆ ಧರಿಸಿದ್ದನು ಎಂಬ ಮಾಹಿತಿ ಲಭ್ಯವಿಲ್ಲ.
ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆ ದೂ.08392-240731, 244145, ಬಳ್ಳಾರಿ ಕಂಟ್ರೋಲ್ ರೂಂ 08392-258100, ಕೌಲ್ ಬಜಾರ್ ಠಾಣೆ ಪಿಐ ಮೊ.9480803047, ಪಿ.ಎಸ್.ಐ 94808203084, 9480803085 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
------------
ಮೇ 14 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-25 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 14 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ನಗರದ ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌAಡ್, ನಾಗಪ್ಪ ಕಟ್ಟೆ, ಹೂವಿನ ಮಾರುಕಟ್ಟೆ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಹೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)

















