ಶುಕ್ರವಾರ, ಜನವರಿ 13, 2023

ವಿವಿಧ ತಳಿಯ ಶ್ವಾನ ಪ್ರದರ್ಶನ ಜ.22ರಂದು ಬಳ್ಳಾರಿ,ಜ.13(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶುಪಲನಾ ಮತ್ತು ಪಶು ಸೇವಾ ವೈದ್ಯಕೀಯ ಸೇವಾ ಇಲಾಖೆ, ಪಶು ವೈದ್ಯಕೀಯ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜ.21 ಮತ್ತು 22ರಂದು ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದ ಅಂಗವಾಗಿ ವಿವಿಧ ತಳಿಯ ಶ್ವಾನ ಪ್ರದರ್ಶನ ಜ.22ರಂದು ಬೆಳಗ್ಗೆ 8ರಿಂದ ವಾಡ್ರ್ಲಾ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ನೊಂದಣಿಗೆ ಕೊನೆಯ ದಿನಾಂಕ ಜ.20ರಂದು ಸಂಜೆ 5 ರವರೆಗೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9448233756, 9901075744, 9980254131 ಅಥವಾ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸವ ಅಚರಣಾ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ