ಸೋಮವಾರ, ಜನವರಿ 16, 2023

ಸಿರಿಧಾನ್ಯ ನಡಿಗೆ ಜ.18ರಂದು ಬಳ್ಳಾರಿ,ಜ.16(ಕರ್ನಾಟಕ ವಾರ್ತೆ): ಬಳ್ಳಾರಿ ಉತ್ಸವದ ಅಂಗವಾಗಿ ಮಾನವನ ಆರೋಗ್ಯಕ್ಕೆ ಸಿರಿಧಾನ್ಯಗಳ ಬಳಕೆಯ ಕುರಿತು ಮಾಹಿತಿ ಫಲಕಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲು ಜ.18ರಂದು ಬೆಳಗ್ಗೆ 7ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಸಿರಿಧ್ಯಾನ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಈ ನಡಿಗೆಗೆ ಕರ್ನಾಟಕ ರಾಜ್ಯ ಜವಳಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ ಅವರು ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಆರಂಭವಾಗಿ ಮೋತಿ ವೃತ್ತದಿಂದ ಎಸ್.ಪಿ ಸರ್ಕಲ್ ಮೂಲಕ ದುರುಗಮ್ಮ ದೇವಸ್ಥಾನ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದಿಂದ ಪುನಃ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿ ಬರಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಉತ್ಸವದ ಮೆರಗನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸವ ಆಚರಣಾ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ