ಶುಕ್ರವಾರ, ಜನವರಿ 20, 2023

ಬಳ್ಳಾರಿ ಉತ್ಸವ ಉದ್ಘಾಟನೆ ಸಮಾರಂಭ ಜ.21ರಂದು ಬಳ್ಳಾರಿ,ಜ.20(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜನವರಿ 21 ಮತ್ತು 22 ರಂದು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನದ ಬಳ್ಳಾರಿ ರಾಘವ ವೇದಿಕೆ ಮತ್ತು ನಗರದ ಕೋಟೆ ಮಲ್ಲೇಶ್ವರ ದೇವಸ್ಥಾನ ಆವರಣದ ಡಾ.ಜೋಳದ ರಾಶಿ ದೊಡ್ಡನಗೌಡರ ವೇದಿಕೆಗಳಲ್ಲಿ ಎರಡು ದಿನಗಳ ಕಾಲ ಬಳ್ಳಾರಿ ಉತ್ಸವ ನಡೆಯಲಿದೆ. *ಉದ್ಘಾಟನಾ ಸಮಾರಂಭವು* ಜ.21ರಂದು ಸಂಜೆ 6ಕ್ಕೆ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನದ ಬಳ್ಳಾರಿ ರಾಘವ ವೇದಿಕೆಯಲ್ಲಿ ಉದ್ಘಾಟನೆ ನಡೆಯಲಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವರಾದ ಆನಂದಸಿಂಗ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಾದ ವಿ.ಸುನೀಲ್‍ಕುಮಾರ್ ಅವರು ಘನಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರುಪಾಕ್ಷಗೌಡ, ಮಹಾನಗರ ಪಾಲಿಕೆ ಮಹಾಪೌರರಾದ ಎಂ.ರಾಜೇಶ್ವರಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಾರುತಿ ಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಜಯ್ ನಾಗಭೂಷಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಎನ್.ಮಂಜುಳಾ, ಕಲಬುರಗಿಯ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಬಾಜಪೇಯಿ, ಬಳ್ಳಾರಿ ವಲಯ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಲೋಕೇಶ್ ಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಪ್ರಕಾಶ್ ಜಿ.ನಿಟ್ಟಾಲಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸಿಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟರಾದ ರಾಘವೇಂದ್ರ ಮತ್ತು ಚಲನಚಿತ್ರ ನಿರ್ಮಾಪಕರಾದ ಆಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಆಗಮಿಸುವರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಲಿಂಗಮೂರ್ತಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ. ನಂತರ ಮುನಿಸಿಪಲ್ ಮೈದಾನದ ಬಳ್ಳಾರಿ ರಾಘವ ವೇದಿಕೆಯಲ್ಲಿ ಸಂಜೆ 6.45ರಿಂದ ರಾತ್ರಿ 12ರವರೆಗೆ ಗಂಗಾವತಿ ಪ್ರಾಣೇಶ ತಂಡದವರಿಂದ ನಗೆಹಬ್ಬ, ಟಾಲಿವುಡ್ ಖ್ಯಾತ ಗಾಯಕಿ ಮಂಗ್ಲಿ ತಂಡದವರಿಂದ ರಸಮಂಜರಿ, ಎಂ.ಡಿ.ಪಲ್ಲವಿ ತಂಡದವರಿಂದ ಗೀತಗಾಯನ, ಅರ್ಜುನ ಜನ್ಯಾ ತಂಡದವರಿಂದ ರಸಮಂಜರಿ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿವೆ. ಇದೇ ದಿನದಂದು ಎರಡನೇಯ ವೇದಿಕೆಯಾದ ಕೋಟೆ ಶ್ರೀ ಮಲ್ಲೇಶ್ವರ ದೇವಸ್ಥಾನದ ಆವರಣದ ಡಾ.ಜೋಳದ ರಾಶಿ ದೊಡ್ಡನಗೌಡರ ವೇದಿಕೆಯಲ್ಲಿಯೂ ಸಂಜೆ 4ರಿಂದ ರಾತ್ರಿ 12ರವರೆಗೆ ವಿವಿಧ ಕಲಾತಂಡಗಳಿಂದ ಸಂಗೀತ, ವಿವಿಧ ನೃತ್ಯ, ಬಯಲಾಟ ಸೇರಿದಂತೆ ಹಲವಾರು ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸವ ಆಚರಣೆಯ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ