ಸೋಮವಾರ, ಜನವರಿ 16, 2023

ಗಾಳಿಪಟ ಸ್ಪರ್ಧೆ ಜ.18ರಂದು ಬಳ್ಳಾರಿ,ಜ.16(ಕರ್ನಾಟಕ ವಾರ್ತೆ): ಬಳ್ಳಾರಿ ಉತ್ಸವದ ಅಂಗವಾಗಿ ಗಾಳಿಪಟ ಸ್ಪರ್ಧೆಯನ್ನು ಜ.18ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಅವರು ಚಾಲನೆ ನೀಡುವರು. ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಿ ಬಳ್ಳಾರಿ ಉತ್ಸವ ಮೆರಗನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸವ ಆಚರಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ