ಶುಕ್ರವಾರ, ಮಾರ್ಚ್ 24, 2023
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023*
*ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ*
ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ): ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಪರವಾನಿಗೆ ಪಡೆದು ಸಾರ್ವಜನಿಕರು ಹೊಂದಿರುವ ಶಸ್ತ್ರ ಮತ್ತು ಮದ್ದುಗುಂಡುಗಳು ಇತ್ಯಾದಿ ಆಯುಧಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಹಾಗೂ ಕೇಂದ್ರ ಚುನಾವಣೆ ಆಯೋಗವು ಹೊರಡಿಸುವ ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೆ ಚುನಾವಣೆ ನಡೆಯುವ ಪ್ರದೇಶಗಳಲ್ಲಿ ಆಯುಧಗಳನ್ನು ಪರವಾನಿಗೆದಾರರು ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದ್ದು, ಪರವಾನಿಗೆದಾರರು ತಕ್ಷಣದಿಂದ ತಾವು ಹೊಂದಿದ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಶಸ್ತ್ರಾಸ್ತ್ರ ತಯಾರಕರು ಮತ್ತು ಮಾರಾಟಗಾರರು ಮಾ.23ರಿಂದ ಕೇಂದ್ರ ಚುನಾವಣಾ ಆಯೋಗವು ಹೊರಡಿಸುವ ನೀತಿ ಸಂಹಿತೆ ಮುಕ್ತಾಯವಾಗುವ ಅವಧಿಯವರೆಗೆ ಪರವಾನಿಗೆದಾರರಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಪ್ರತಿದಿನ ತಮ್ಮ ಮಾರಾಟ ದಾಸ್ತಾನು ವ್ಯವಹಾರಗಳ ವಿವರವನ್ನು ಜಿಲ್ಲಾ ದಂಡಾಧಿಕಾರಿಗಳ ಕಚೇರಿಗೆ ಒಪ್ಪಿಸಬೇಕು.
ಪರವಾನಿಗೆದಾರರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಚುನಾವಣೆಯ ನೀತಿ ಸಂಹಿತೆ ಮುಗಿದ ನಂತರ ಬಿಡುಗಡೆ ಮಾಡಲಾಗುವುದು ಎಂದು ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ