ಶುಕ್ರವಾರ, ಮಾರ್ಚ್ 24, 2023

ಅರ್ಜಿ ಆಹ್ವಾನ ಬಳ್ಳಾರಿ,ಮಾ23(ಕರ್ನಾಟಕ ವಾರ್ತೆ): 2022-23ನೇ ಸಾಲಿನ ಕಂಪ್ಲಿ ಪುರಸಭೆ ನಿಧಿಯಡಿ ಶೇ.24.10 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಶೇ.7.25ರ ಯೋಜನೆಯಡಿ ಇತರೆ ಬಡ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಕುಡಿಯುವ ನೀರಿನ ನಳದ ಸಂಪರ್ಕ ಶುಲ್ಕ ಭರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮಾ.27 ರೊಳಗಾಗಿ ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ಶಿವಲಿಂಗಪ್ಪ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ