ಮಂಗಳವಾರ, ಮಾರ್ಚ್ 14, 2023
8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಉತ್ತರಖಾಂಡ ರಾಜ್ಯದ ಡೆಹರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ ಜನವರಿ 2024 ನೇ ಅಧಿವೇಶನಕ್ಕಾಗಿ 8ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 3 ರಂದು ನಡೆಸಲಾಗುವುದು.
ಅರ್ಹತೆಗಳು: ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 1-1-2024 ರಂತೆ ಹನ್ನೊಂದುವರೆ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 2-1-2011 ರಿಂದ 1-7-2012 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಅರ್ಜಿ ನಮೂನೆಗಳನ್ನು ಪಡೆಯುವ ವಿಧಾನ: ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ, ಡೆಹರಾಡೂನ್ ಉತ್ತರಾಖಂಡ, ಪಿನ್-248003 ಇಲ್ಲಿ ಪಡೆಯಬಹುದು.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರಿಲ್ 15 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಭವನ್, ನಂ 58. ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.080-25589459 ಅಥವಾ ಸಮೀಪದಲ್ಲಿರುವ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ