ಮಂಗಳವಾರ, ಮಾರ್ಚ್ 14, 2023
ವಿಶ್ವ ಗ್ರಾಹಕರ ದಿನಾಚರಣೆ ಮಾ.15ರಂದು
ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೆ.ಎಫ್.ಸಿ.ಎಸ್.ಸಿ ಇವರ ಸಂಯುಕ್ತಾಶ್ರಯದಲ್ಲಿ “ಶುದ್ಧ ಶಕ್ತಿ ಪರಿವರ್ತನೆ” ಎಂಬ ಘೋಷವಾಕ್ಯದೊಂದಿಗೆ ವಿಶ್ವ ಗ್ರಾಹಕರ ದಿನಾಚರಣೆಯನ್ನು ಮಾ.15 ರಂದು ಬೆಳಗ್ಗೆ 11 ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿದೇವಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿಗಳಾದ ಸತೀಶ್ ಜೆ.ಬಾಳಿ ಅವರು ಘನಉಪಸ್ಥಿತಿ ಇರುವರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸೋಮಶೇಖರಪ್ಪ ಕೆ.ಹಂದಿಗೋಳ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ವಕೀಲರಾದ ಕೆ.ಎರ್ರಿಗೌಡ ಸೇರಿದಂತೆ ಇತರರು ಆಗಮಿಸಲಿದ್ದಾರೆ.
ವಿಶೇಷ ಉಪನ್ಯಾಸ: ಜಿಲ್ಲಾ ವಕೀಲರ ಸಂಘದ ಹಿರಿಯ ವಕೀಲರಾದ ಅಂಕಲಯ್ಯ ಅವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ ಅವರು ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ನೀಡುವರು.
ಈ ಸಂದರ್ಭದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಮೊಹಮ್ಮದ್ ಖಿಜರ್ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ್ ಹಾಗೂ ಇತರರು ಉಪಸ್ಥಿತರಿರಲಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ