ಗುರುವಾರ, ಮಾರ್ಚ್ 16, 2023
ಬಳ್ಳಾರಿ: ಮಹಾನಗರ ಪಾಲಿಕೆಯಿಂದ ರಾಜಕೀಯ ಪಕ್ಷಗಳ ಮುಖಂಡರ ಸಭೆ
ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಬಂಧ ಸೋಮವಾರದಂದು ರಾಜಕೀಯ ಪಕ್ಷಗಳ ಮುಖಂಡರುಗಳ ಸಭೆ ನಡೆಯಿತು.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ಮಾತನಾಡಿ, 2023 ಏ.1ಕ್ಕೆ 18 ವರ್ಷ ಪೂರೈಸುವ ಯುವ ಜನತೆಯು ನಮೂನೆ-6ರ ಅರ್ಜಿ ಮೂಲಕ ಹೆಸರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಬಹುದು ಎಂದು ತಿಳಿಸಿದರು.
ರಾಷ್ಟ್ರೀಯ ಪಕ್ಷಗಳಿಗೆ ಅರ್ಹತಾ 2023 ಜ.1ರ ಅಂತಿಮ ಮತದಾರರ ಪಟ್ಟಿಯನ್ನು ಉಚಿತವಾಗಿ ನೀಡಲಾಗಿದೆ. ಸದರಿ ಪಟ್ಟಿಯಲ್ಲಿ ಹೆಸರು ನೊಂದಣಿಯಾಗದಿದ್ದಲ್ಲಿ ಅರ್ಹ ನಾಗರಿಕರು ನಮೂನೆ-6ರ ಮೂಲಕ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದರು.
ರಾಜಕೀಯ ಪಕ್ಷದಿಂದ ಪ್ರತಿಯೊಂದು ಮತಗಟ್ಟೆಗೆ ಒಬ್ಬ ಬೂತ್ ಲೆವೆಲ್ ಏಜೆಂಟ್ ನೇಮಿಸಲು ಕ್ರಮವಹಿಸಲಾಗುವುದು. 1,500ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಯಲ್ಲಿ ಸಹಾಯಕ ಮತಗಟ್ಟೆ ಸ್ಥಾಪಿಸಲಾಗುವುದು. ಇ.ವಿ.ಎಂ ಪ್ರಾತ್ಯಕ್ಷಿಕೆಯನ್ನು ಮತಗಟ್ಟೆವಾರು ಸೆಕ್ಟರ್ ಅಧಿಕಾರಿಗಳ ಮೂಲಕ ಮತದಾರರಿಗೆ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್ ಬಗ್ಗೆ ಅರಿವು ಮೂಡಿಸಲು ಕ್ರಮವಹಿಸಲಾಗಿದೆ ಎಂದರು.
ಪ್ರತಿ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ರ್ಯಾಂಪ್, ಕುಡಿಯುವ ನೀರು, ಶೌಚಾಲಯ ಮತ್ತು ನೆರಳಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಪಕ್ಷ, ಕಾಂಗ್ರೇಸ್ ಪಕ್ಷ, ಜನತಾದಳ ಪಕ್ಷ, ಆಮ್ ಆದ್ಮಿ ಪಕ್ಷ, ಸಿ.ಪಿ.ಎಂ ಪಕ್ಷದ ಮುಖಂಡರುಗಳು ಹಾಗೂ ಇತರರು ಇದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ