ಬುಧವಾರ, ಮಾರ್ಚ್ 29, 2023
ಯುವ ಸಂವಾದ್ ಕಾರ್ಯಕ್ರಮ: ಅರ್ಜಿ ಆಹ್ವಾನ
ಬಳ್ಳಾರಿ,ಮಾ.29(ಕರ್ನಾಟಕ ವಾರ್ತೆ): ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಮತ್ತು ಸ್ವಾಯತ್ತ ಸಂಸ್ಥೆ ನೆಹರು ಯುವ ಕೇಂದ್ರದಿಂದ ಏಪ್ರೀಲ್ 1 ರಿಂದ ಮೇ 31 ರವರೆಗೆ ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸಮುದಾಯ ಆಧಾರಿತ ಸಂಸ್ಥೆಗಳ ಮೂಲಕ ಯುವ ಸಂವಾದ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಜಿಲ್ಲಾ ನೆಹರು ಯುವ ಕೇಂದ್ರದಿಂದ ಜಿಲ್ಲೆಯ ವಿವಿಧ ಎಲ್ಲಾ ಸಮುದಾಯ ಆಧಾರಿತ ಸಂಸ್ಥೆಗಳ ಸಹಕಾರ ಮತ್ತು ಬೆಂಬಲದೊಂದಿಗೆ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಮುದಾಯ ಆಧಾರಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಸಂಸ್ಥೆಗಳು ರಾಜಕೀಯೇತರ, ಪಕ್ಷಾತೀತವಾಗಿ ಹಿನ್ನಲೆ ಹೊಂದಿರುವ ಮತ್ತು ಯುವ ಸಂವಾದ್ ಕಾರ್ಯಕ್ರಮವನ್ನು ನಡೆಸಲು ಸಾಕಷ್ಟು ಸಾಂಸ್ಥಿಕ ಶಕ್ತಿಯನ್ನು ಹೊಂದಿರಬೇಕು. ಸಂಸ್ಥೆಗಳ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಬಾಕಿ ಇರಬಾರದು. ಕಾರ್ಯಕ್ರಮಗಳ ಸಂಘಟನೆಗಾಗಿ ಪ್ರತಿ ಜಿಲ್ಲೆಗೆ 3 ಸಮುದಾಯ ಆಧಾರಿತ ಸಂಸ್ಥೆಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಸಂಸ್ಥೆಗಳು ಅರ್ಜಿಗಳನ್ನು ಜಿಲ್ಲಾ ನೆಹರು ಯುವ ಕೇಂದ್ರದಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ನೆಹರು ಯುವ ಕೇಂದ್ರ ಕಚೇರಿ ಅಥವಾ ದೂ.08392-276839 ಗೆ ಸಂಪಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ