ಗುರುವಾರ, ಮಾರ್ಚ್ 30, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿ ಸ್ಥಳಾಂತರ ಬಳ್ಳಾರಿ,ಮಾ.30(ಕರ್ನಾಟಕ ವಾರ್ತೆ): ನಗರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಯು ಜಿಲ್ಲಾಧಿಕಾರಿಗಳ ಆದೇಶದಂತೆ ಮಾ.31ರಿಂದ ಹೊಸದಾಗಿ ನಿರ್ಮಾಣಗೊಂಡಿರುವ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಗೊಂಡಿದೆ. ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಪತ್ರ ಹಾಗೂ ರಹಸ್ಯ ಪತ್ರಗಳನ್ನು ಉಪನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಡಾ.ರಾಜ್‍ಕುಮಾರ್ ರಸ್ತೆ, ಬಳ್ಳಾರಿ. ದೂ.08932-272557 ಹಾಗೂ ddfcs.bly-ka@nic.in ಇ-ಮೇಲ್ ಗೆ ಕಳುಹಿಸಿಕೊಡಬೇಕಾಗಿರುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ