ಶುಕ್ರವಾರ, ಮಾರ್ಚ್ 31, 2023

ಸಾರ್ವತ್ರಿಕ ವಿಧಾನಸಭೆ ಚುನಾವಣೆ; ಕಂಟ್ರೋಲ್ ರೂಂ ಆರಂಭ ಬಳ್ಳಾರಿ,ಮಾ.31(ಕರ್ನಾಟಕ ವಾರ್ತೆ): ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 08392-277100 ಮತ್ತು 1950 ಕರೆ ಮಾಡಿ ತಿಳಿಸಿಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ