ಸೋಮವಾರ, ಮಾರ್ಚ್ 27, 2023

ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಮಾ.28ರಂದು ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಮಾ.28ರಂದು ಬೆಳಗ್ಗೆ 10ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಲಾಗಿದೆ. ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರುಪಾಕ್ಷಗೌಡ, ಮಹಾನಗರ ಪಾಲಿಕೆಯ ಮಹಾಪೌರರಾದ ಎಂ.ರಾಜೇಶ್ವರಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸರ್ವಶೆಟ್ಟಿ ಮಾರುತಿ ಪ್ರಸಾದ್ ಅವರು ಭಾಗವಹಿಸುವರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್.ಎನ್ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ