ಶನಿವಾರ, ಮಾರ್ಚ್ 18, 2023

ಅವಧಿ ವಿಸ್ತರಣೆ ಬಳ್ಳಾರಿ,ಮಾ.18(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾರ್ಚ್ 27 ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 080-8050370006 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ಅವರು ತಿಳಿಸಿದ್ದಾರೆ. ----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ