ಗುರುವಾರ, ಮಾರ್ಚ್ 16, 2023
ಕೆಪಿಎಸ್‍ಸಿ; ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಮಾ.18, 19
ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲೂ 200 ಮೀ ವ್ಯಾಪ್ತಿ ನಿಷೇಧ
ಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿ ಮಾಡಲು ಕನ್ನಡ ಭಾಷೆ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕೆಗಳನ್ನು ಮಾ.18ರಂದು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಮತ್ತು ಮಾ.19 ರಬೆಳಗ್ಗೆ 10ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ನಡೆಯಲಿವೆ.
ಸುಗಮವಾಗಿ ಪರೀಕ್ಷೆಗಳು ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 4 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ನಗರದ ನಲ್ಲಚೇರುವು ಪ್ರದೇಶದ ವಿಜ್ಞಾನ ಕೇಂದ್ರ ಹಿಂಭಾಗ ಶ್ರೀಮತಿ.ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಮೆಮೊರಿಯಲ್ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್, ನಗರದ ಎಸ್.ಎನ್.ಪೇಟೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜ್, ಈದ್ಗಾ ರಸ್ತೆಯ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆ ಮತ್ತು ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿ ಆದೇಶಿಸಿದ್ದಾರೆ.
----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ