ಗುರುವಾರ, ಮಾರ್ಚ್ 16, 2023
ಮನೆ ತ್ಯಾಜ್ಯ ಸಂಗ್ರಹಣೆ, ಒಳಚರಂಡಿ ನಿರ್ವಹಣೆ ಕಾರ್ಯದಲ್ಲಿ ವ್ಯತ್ಯಯ
ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ಚಾಲಕರು ಕಮ್ ಆಪರೇಟರ್ಸ್ ಮತ್ತು ಕ್ಲೀನರ್ಸ್‍ಗಳು ಮಾರ್ಚ್ 16ರಿಂದ ಮುಷ್ಕರವನ್ನು ಹಮ್ಮಿಕೊಂಡಿರುವ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ಮನೆ ಮನೆ ತ್ಯಾಜ್ಯ ಸಂಗ್ರಹಣೆ ಹಾಗೂ ಒಳಚರಂಡಿ ನಿರ್ವಹಣೆ ಕಾರ್ಯದಲ್ಲಿ ವ್ಯತ್ಯಯವಾಗುವ ಸಂಭವವಿರುತ್ತದೆ.
ಪ್ರಯುಕ್ತ ತ್ಯಾಜ್ಯವನ್ನು ಹೊರಗಡೆ ಬಿಸಾಡದೇ ನಗರದ ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಬೇಕು ಹಾಗೂ ಪಾಲಿಕೆಯಿಂದ ಶೀಘ್ರದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ