ಗುರುವಾರ, ಮಾರ್ಚ್ 16, 2023

ಮಾ.17ರಂದು ಪ್ರಿಂಟಿಂಗ್ ಪ್ರೆಸ್ ಮಾಲೀಕರೊಂದಿಗೆ ಸಭೆ ಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ): ಮುಂಬರುವ ದಿನಗಳಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಘೋಷಣೆಯಾಗಲಿದ್ದು, ಜಿಲ್ಲೆಯಲ್ಲಿನ ಎಲ್ಲಾ ಪ್ರಿಂಟಿಂಗ್ ಪ್ರೆಸ್ ಮಾಲೀಕರೊಂದಿಗೆ ಚುನಾವಣಾ ಆಯೋಗ ಮಾರ್ಗದರ್ಶನದಂತೆ ಪ್ರಿಂಟರ್ಸ್, ಬಂಟಿಂಗ್ಸ್, ಬ್ಯಾನರ್ಸ್‍ಗಳನ್ನು ಮುದ್ರಿಸುವ ಕುರಿತು ಚರ್ಚಿಸಲು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಮಾ.17ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರೊಂದಿಗೆ ಸಭೆಯನ್ನು ಏರ್ಪಡಿಸಲಾಗಿದೆ. ಮಾದರಿ ನೀತಿ ಸಂಹಿತೆ ಹಾಗೂ ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತವು ಕ್ರಮ ಕೈಗೊಳ್ಳಲಾಗುತ್ತಿದ್ದು, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ಮುದ್ರಿತವಾಗಿರುವ ಅಫಿಡೆವಿಟ್‍ಗಳ ಪ್ರತಿಗಳು ಮತ್ತು ಕರಪತ್ರಗಳು, ಬ್ಯಾನರ್‍ಗಳು ಅಥವಾ ಯಾವುದೇ ಇತರೆ ಮುದ್ರಿತ ಸಾಮಾಗ್ರಿಗಳ ವಿವರಗಳೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ