ಮಂಗಳವಾರ, ಮಾರ್ಚ್ 21, 2023
ನಿಧಿ ಅಪ್ಕೆ ನಿಕಟ್ ಮಾ.27ರಂದು
ಬಳ್ಳಾರಿ,ಮಾ.20(ಕರ್ನಾಟಕ ವಾರ್ತೆ): ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಜಿಲ್ಲಾ ಪ್ರಾದೇಶಿಕ ಕಚೇರಿಯ ಉದ್ಯೋಗಿಗಳ ಭವಿಷ್ಯನಿಧಿ ಮತ್ತು ಪಿಂಚಣಿ ಇತ್ಯಾದಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ನಿವಾರಿಸಲು ಮಾ.27ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ‘ನಿಧಿ ಆಪ್ಕೆ ನಿಕಟ್' ನಗರದ ಸಂಡೂರು ತಾಲೂಕಿನ ಆದರ್ಶ ಕಲ್ಯಾಣ ಮಂಟಪ ಹಾಲ್‍ನಲ್ಲಿ ನಡೆಯಲಿದೆ ಎಂದು ಬಳ್ಳಾರಿ ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ. ವೆಂಕಟಸುಬ್ಬಯ್ಯ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯಕ್ಕೆ ಅರಿವು ಮೂಡಿಸುವ ಮತ್ತು ಪ್ರಭಾವ ಬೀರುವ ಕಾರ್ಯಕ್ರಮವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ:08392-226304ಗೆ ಸಂಪರ್ಕಿಸಬಹುದಾಗಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ