ಶನಿವಾರ, ಏಪ್ರಿಲ್ 15, 2023
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ
ಎರಡನೇ ದಿನ 09 ಮಂದಿ ಉಮೇದುವಾರಿಕೆ ಸಲ್ಲಿಕೆ
ಬಳ್ಳಾರಿ,ಏ.15(ಕರ್ನಾಟಕ ವಾರ್ತೆ):
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಿಂದ ಪ್ರಾರಂಭವಾಗಿದ್ದು, ಎರಡನೇ ದಿನವಾದ ಶನಿವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಿಂದ ಒಟ್ಟು 09 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
91-ಕಂಪ್ಲಿ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಎಸ್‍ಯುಸಿಐ (ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ) ಪಕ್ಷದ ಅಭ್ಯರ್ಥಿಯಾಗಿ ಎ.ದೇವದಾಸ್, ಭಾರತೀಯ ಜನತಾ ಪಕ್ಷ ಅಭ್ಯರ್ಥಿಯಾಗಿ ಟಿ.ಹೆಚ್.ಸುರೇಶ್‍ಬಾಬು ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
92-ಸಿರುಗುಪ್ಪ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಟಿ.ದರಪ್ಪ ನಾಯಕ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಸಿ.ರಾಧಾ ಅವರು ನಾಮಪತ್ರ ಸಲ್ಲಿಸಿದ್ದಾರೆ.
93-ಬಳ್ಳಾರಿ ಗ್ರಾಮೀಣ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಕೆಆರ್‍ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷದ ಅಭ್ಯರ್ಥಿಯಾಗಿ ವಾಲ್ಮೀಕಿ ಯುಗಂಧರ ಅವರು ನಾಮಪತ್ರ ಸಲ್ಲಿಸಿದ್ದಾರೆ.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಜನಹಿತ ಪಕ್ಷದ ಅಭ್ಯರ್ಥಿಯಾಗಿ ಆಲೇಶ್ವರ ಗೌಡ.ಹೆಚ್ ಮತ್ತು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜಿ.ಸೋಮಶೇಖರ ರೆಡ್ಡಿ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ