ಮಂಗಳವಾರ, ಏಪ್ರಿಲ್ 18, 2023

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಜಿಲ್ಲೆಯಲ್ಲಿ 10 ಅಭ್ಯರ್ಥಿಗಳಿಂದ ಒಟ್ಟು 15 ನಾಮಪತ್ರ ಸಲ್ಲಿಕೆ ಬಳ್ಳಾರಿ, ಏ.18 (ಕರ್ನಾಟಕ ವಾರ್ತೆ): ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರದಂದು 10 ಅಭ್ಯರ್ಥಿಗಳಿಂದ ಒಟ್ಟು 15 ನಾಮಪತ್ರ ಸ್ವೀಕೃತಗೊಂಡಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. 91-ಕಂಪ್ಲಿ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ರಾಜಪ್ಪ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಜೆ.ಎನ್.ಗಣೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. 92-ಸಿರುಗುಪ್ಪ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಬಿ.ಲೋಕೇಶ್ ಮತ್ತು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಂ.ಎಸ್.ಸೋಮಲಿಂಗಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. 93-ಬಳ್ಳಾರಿ ಗ್ರಾಮೀಣ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ. 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನಾರಾ ಭರತ್ ರೆಡ್ಡಿ ಅವರು ನಾಲ್ಕು ನಾಮಪತ್ರ, ಬಹುಜನ ಸಮಾಜ ಪಕ್ಷದಿಂದ ಬಾಬು.ಕೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಿ ಅರುಣ.ಜಿ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಬ್ರಹ್ಮಿಣಿ ರೆಡ್ಡಿ.ಜಿ ಅವರು ನಾಮಪತ್ರ ಸಲ್ಲಿಸಿದ್ದಾರೆ. 95-ಸಂಡೂರು ವಿಧಾನಸಭಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಸ್.ದಿವಾಕರ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ