ಗುರುವಾರ, ಏಪ್ರಿಲ್ 6, 2023
*ಮಾದರಿ ನೀತಿ ಸಂಹಿತೆ; ಚೆಕ್‍ಪೋಸ್ಟ್‍ಗಳಲ್ಲಿ ಬಿಗಿ ಭದ್ರತೆ*
*10 ಲಕ್ಷ ರೂ. ನಗದು ಹಣ, 131.13 ಲೀ ಮದ್ಯ ವಶ: ಡಿಸಿ ಮಾಲಪಾಟಿ ಮಾಹಿತಿ*
ಬಳ್ಳಾರಿ,ಏ.5(ಕರ್ನಾಟಕ ವಾರ್ತೆ): ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಬುಧವಾರದಂದು ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ನಗದು ಹಣ ಸೇರಿ 131.13 ಲೀಟರ್ (ರೂ.50,268 ಸಾವಿರ ಬೆಲೆಬಾಳುವ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 ಫ್ಲೈಯಿಂಗ್ ಸ್ವ್ಯಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡ ಕೆಲಸ ನಿರ್ವಹಿಸುತ್ತಿವೆ.
ಬುಧವಾರ ವರದಿಯ ಪ್ರಕಾರ, 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಟಾಟಿಕ್ ಸರ್ವೈವ್‍ಲೆನ್ಸ್ ಟೀಮ್(ಎಸ್‍ಎಸ್‍ಟಿ) ತಂಡವು ಪರಿಶೀಲನೆ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷ ರೂ.ಗಳನ್ನು ವಶಪಡಿಸಿಕೊಂಡು ಕಮಿಟಿ ಮುಂದೆ ಹಾಜರು ಪಡಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಯಾವುದೇ ಎಫ್‍ಐಆರ್ ಪ್ರಕರಣ ದಾಖಲಿಸಿರುವುದಿಲ್ಲ.
ಅಬಕಾರಿ ಇಲಾಖೆಯಿಂದ 102.60 ಲೀಟರ್ ಮದ್ಯ(37,668 ಸಾವಿರ ರೂ. ಬೆಲೆಬಾಳುವ) ಹಾಗೂ ಪೆÇಲೀಸ್ ಇಲಾಖೆಯಿಂದ 28.53 ಲೀಟರ್ (12,600 ರೂ. ಬೆಲೆಬಾಳುವ) ಮದ್ಯ ಸೇರಿದಂತೆ ಒಟ್ಟು 131.13 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ