ಗುರುವಾರ, ಏಪ್ರಿಲ್ 20, 2023
ಮಾದರಿ ನೀತಿ ಸಂಹಿತೆ ಉಲ್ಲಂಘನೆ; 2 ಪ್ರಕರಣ ದಾಖಲು
20.46 ಲಕ್ಷ ರೂ. ಮೌಲ್ಯದ 9088.71 ಲೀ ಮದ್ಯ ವಶಕ್ಕೆ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ
ಬಳ್ಳಾರಿ,ಏ.20(ಕರ್ನಾಟಕ ವಾರ್ತೆ):
ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಬುಧವಾರ ಅನಧಿಕೃತವಾಗಿ ಸಾಗಿಸುತ್ತಿದ್ದ 20,46,698 ರೂ. ಮೌಲ್ಯದ 9088.71 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಿಂದ 9078.54 ಲೀಟರ್ (20,41,931 ರೂ. ಬೆಲೆಯ) ಮದ್ಯ ಮತ್ತು ಪೊಲೀಸ್ ಇಲಾಖೆಯಿಂದ 10.17 ಲೀಟರ್ (4,767 ರೂ. ಬೆಲೆಯ) ಮದ್ಯ ವಶಪಡಿಸಿಕೊಳ್ಳಲಾಗಿದೆ.
ಈಗಾಗಲೇ ವಶಪಡಿಸಿಕೊಂಡಿದ್ದ 2,83,500 ರೂ. ಹಣವನ್ನು ಫ್ಲೈಯಿಂಗ್ ಸÁ್ಕ್ವ್ಯಡ್ ತಂಡ, ಎಸ್‍ಎಸ್‍ಟಿ ಹಾಗೂ ಪೊಲೀಸ್ ತಂಡಗಳ ಪರಿಶೀಲನೆ ನಡೆಸಿ, ಜಿಲ್ಲಾ ಹಣ ಬಿಡುಗಡೆ ಸಮಿತಿಯಿಂದ ಸಂಬಂಧಪಟ್ಟವರಿಗೆ ಬಿಡುಗಡೆ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ 2 ಪ್ರಕರಣಗಳು ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ