ಬುಧವಾರ, ಏಪ್ರಿಲ್ 26, 2023
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ನಿರ್ಬಂಧ ವಿಧಿಸಿ ಡಿಸಿ ಮಾಲಪಾಟಿ ಆದೇಶ
ಬಳ್ಳಾರಿ,ಏ.26(ಕರ್ನಾಟಕ ವಾರ್ತೆ):
ಜಿಲ್ಲೆಯ 04 ತಾಲೂಕಿನ 13 ಪರೀಕ್ಷಾ ಕೇಂದ್ರಗಳಲ್ಲಿ ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಏ.29 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ 2023 ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಆಯಾ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್‍ಗಳನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 2.30 ರವರೆಗೆ ಮುಚ್ಚುವಂತೆ ಹಾಗೂ ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ