ಶುಕ್ರವಾರ, ಏಪ್ರಿಲ್ 21, 2023

ರೈತರು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ ಬಳ್ಳಾರಿ,21(ಕರ್ನಾಟಕ ವಾರ್ತೆ): ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‍ಬಿವೈ) ಅಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನ ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಗಳೊಂದಿಗೆ ಹೊಂದಾಣಿಕೆಯಾಗದೆ ಇರುವ ವಿಮಾ ಸಂಸ್ಥೆಗಳಿಂದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ರೈತರು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ದಯಾನಂದ.ಎಂ ಅವರು ತಿಳಿಸಿದ್ದಾರೆ. ಬಳ್ಳಾರಿ ಮತ್ತು ಕುರುಗೋಡು ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 11 ಪ್ರಸ್ತಾವನೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ 122 ಪ್ರಸ್ತಾವನೆಗಳು ಆಕ್ಷೇಪಣೆಗೊಂಡಿರುತ್ತವೆ. ರೈತರು ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನ ಮೇ 05 ಆಗಿದ್ದು, ನಿಗದಿತ ಸಮಯದೊಳಗೆ ಆಕ್ಷೇಪಣೆಗಳನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ