ಬುಧವಾರ, ಏಪ್ರಿಲ್ 19, 2023

ವಿಧಾನಸಭಾ ಸಾರ್ವತ್ರಿಕ ಚುನಾವಣೆ: ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 23 ನಾಮಪತ್ರ ಸ್ವೀಕಾರ ಬಳ್ಳಾರಿ,ಏ.19(ಕರ್ನಾಟಕ ವಾರ್ತೆ): ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರದಂದು, ಒಟ್ಟು 23 ನಾಮಪತ್ರಗಳು ಸ್ವೀಕೃತಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. *ಕಂಪ್ಲಿ ವಿಧಾನಸಭಾ ಕ್ಷೇತ್ರ:* 91-ಕಂಪ್ಲಿ ವಿಧಾನಸಭಾ ಕ್ಷೇತ್ರದಿಂದ ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ರಾಜಪ್ಪ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. *ಸಿರುಗುಪ್ಪ ವಿಧಾನಸಭಾ ಕ್ಷೇತ್ರ:* 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಟಿ.ದರಪ್ಪ ನಾಯಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಹೆಚ್.ಸಿ.ರಾಧಾ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಬಿ.ಎಮ್.ನಾಗರಾಜ ಅವರು ಎರಡು ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿಯಾಗಿ ಎಮ್.ಹೆಚ್.ವೀರೇಶಪ್ಪ ಹುಣಸೇಮರದವರು ನಾಮಪತ್ರ ಸಲ್ಲಿಸಿದ್ದಾರೆ. *ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ:* 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಟಿ.ಹೆಚ್.ಮಲ್ಲಿಕಾರ್ಜುನ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಬಿ.ನಾಗೇಂದ್ರ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. *ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ:* 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಚಾಂದ್‍ಬಾಷ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ದೊಡ್ಡ ಕೇಶವ ರೆಡ್ಡಿ, ದೇಶ ಪ್ರೇಮ ಪಕ್ಷದ ಅಭ್ಯರ್ಥಿಯಾಗಿ ಡಾ.ಕೆ.ಆರ್.ರವಿಕುಮಾರ, ಪಕ್ಷೇತರ ಅಭ್ಯರ್ಥಿಯಾಗಿ ಮೊಹಮ್ಮದ್ ರಿಯಾಜ್ ಅಹಮ್ಮದ್, ಪಕ್ಷೇತರ ಅಭ್ಯರ್ಥಿಯಾಗಿ ಜಿ.ವಿಜಯಮ್ಮ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜಿ.ಸೋಮಶೇಖರ ರೆಡ್ಡಿ ಅವರು ಎರಡು ನಾಮಪತ್ರ, ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಆರ್.ವೇಣುಗೋಪಾಲ್, ಪಕ್ಷೇತರ ಅಭ್ಯರ್ಥಿಯಾಗಿ ಜಾಕೀರ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜೆ.ವಿ.ಮಂಜುನಾಥ ಮತ್ತು ಎಸ್‍ಯುಸಿಐ (ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ) ಪಕ್ಷದ ಅಭ್ಯರ್ಥಿಯಾಗಿ ಆರ್.ಸೋಮಶೇಖರ ಗೌಡ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. *ಸಂಡೂರು ವಿಧಾನಸಭಾ ಕ್ಷೇತ್ರ:* 95-ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಸೋಮಪ್ಪ.ಎನ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ.ತುಕಾರಾಮ್ ಮತ್ತು ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಎನ್.ಎಸ್.ರೇಖಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ