ಗುರುವಾರ, ಏಪ್ರಿಲ್ 20, 2023
ವಿಧಾನಸಭಾ ಸಾರ್ವತ್ರಿಕ ಚುನಾವಣೆ:*
*ಕೊನೆಯ ದಿನದಂದು 36 ಅಭ್ಯರ್ಥಿಗಳಿಂದ ಒಟ್ಟು 42 ನಾಮಪತ್ರ ಸಲ್ಲಿಕೆ*
ಬಳ್ಳಾರಿ,ಏ.20(ಕರ್ನಾಟಕ ವಾರ್ತೆ):
ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಗುರುವಾರದಂದು, 36 ಅಭ್ಯರ್ಥಿಗಳಿಂದ ಒಟ್ಟು 42 ನಾಮ ಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಉತ್ತನೂರು ನಾಗರಾಜ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಪ್ರಹ್ಲಾದ ನಾಯಕ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಟಿ.ಹೆಚ್.ಸುರೇಶ್ ಬಾಬು ಅವರು ಎರಡು, ದೇಶ ಪ್ರೇಮ ಪಕ್ಷದ ಅಭ್ಯರ್ಥಿಯಾಗಿ ರಾಮಕ್ಕ.ಟಿ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ನಾಯಕರ ದುರುಗಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ.
92-ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಬಿ.ಲೋಕೇಶ್, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಬಿ.ಪರಮೇಶ್ವರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಮ್.ಎಸ್.ಸಿದ್ದಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಹೆಚ್.ಸಿ.ರಾಧಾ, ಪಕ್ಷೇತರ ಅಭ್ಯರ್ಥಿಯಾಗಿ ಮಾರೆಣ್ಣ, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಮಲ್ಲಯ್ಯ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಟಿ.ದರಪ್ಪ ನಾಯಕ, ಪಕ್ಷೇತರ ಅಭ್ಯರ್ಥಿಯಾಗಿ ಹನುಮಂತ.ಎಸ್,
ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿಯಾಗಿ ಎಮ್.ಹೆಚ್.ವೀರೇಶಪ್ಪ ಹುಣಸೇಮರದವರು ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿಯಾಗಿ ಈರಬಸಮ್ಮ ಹುಣಸೇಮರದವರು ನಾಮಪತ್ರ ಸಲ್ಲಿಸಿದ್ದಾರೆ.
93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಷಣ್ಮುಖ ನವೀನ್ ಬಾಬು, ಪಕ್ಷೇತರ ಅಭ್ಯರ್ಥಿ ಕೆ.ಶಂಭುಲಿಂಗ ಅವರು ಎರಡು, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜೆ.ತಿಪ್ಪೇಸ್ವಾಮಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಬಿ.ನಾಗೇಂದ್ರ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ವೆಂಕಟೇಶ್ ಪ್ರಸಾದ್ ಮತ್ತು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ನಾಯ್ಕರ ಕ್ರಿಷ್ಣಪ್ಪ ಅವರು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‍ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಕಂದೂರಿ ಅಜೇಯ ಕುಮಾರ್, ಪಕ್ಷೇತರ ಅಭ್ಯರ್ಥಿ ಉಪ್ಪಾರ ಅನೀಲ್ ಕುಮಾರ್, ಪಕ್ಷೇತರ ಅಭ್ಯರ್ಥಿ ಗಂಗಿರೆಡ್ಡಿ, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಅನೀಲ್ ಹೆಚ್ ಲಾಡ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಸಿ.ಶರಣ ಬಸಪ್ಪ, ಪಕ್ಷೇತರ ಅಭ್ಯರ್ಥಿ ಬಿ.ಆರ್.ಮಂಜುನಾಥ, ಪಕ್ಷೇತರ ಅಭ್ಯರ್ಥಿ ನಾರಾಯಣ ಸ್ವಾಮಿ, ಪಕ್ಷೇತರ ಅಭ್ಯರ್ಥಿ ಶ್ರೀಧರ್.ಕೆ, ಪಕ್ಷೇತರ ಅಭ್ಯರ್ಥಿ ಕೆ.ಭರತ್ ಬಾಬು, ಪಕ್ಷೇತರ ಅಭ್ಯರ್ಥಿ ಎಸ್.ಬಿ.ಶಿವಕುಮಾರ್, ಪಕ್ಷೇತರ ಅಭ್ಯರ್ಥಿ ಅಹಮ್ಮದ್ ಮೊಹಮ್ಮದ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಅನೀಲ್ ಹೆಚ್ ಲಾಡ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
95-ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕೆ.ಆರ್.ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ಗೆರೆಗಲ್ ಪಾಪಯ್ಯ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿಲ್ಪ ಪಾಟೀಲ್ ಮತ್ತು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಕುಂತಲ.ಕೆ ಅವರು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.
ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ