ಸೋಮವಾರ, ಏಪ್ರಿಲ್ 24, 2023

ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಮತಗಟ್ಟೆ ಸಿಬ್ಬಂದಿಗಳ ನಿಯೋಜನೆಗೆ ಕುರಿತಂತೆ ಎರಡನೇ ಹಂತದ ರ್ಯಾಂಡಮೈಜೇಷನ್* *ಐದು ಮತ ಕ್ಷೇತ್ರಗಳಿಗೆ 5815 ಸಿಬ್ಬಂದಿ ನೇಮಕ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ* ಬಳ್ಳಾರಿ, ಏ.23(ಕರ್ನಾಟಕ ವಾರ್ತೆ): ವಿಧಾನಸಭಾ ಸಾರ್ವತ್ರಿಕ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಚುನಾವಣಾ ವೀಕ್ಷಕರ ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲೆಯ ಐದು ವಿಧಾನಸಬಾ ಕ್ಷೇತ್ರಗಳ ಮತಗಟ್ಟೆ ಕೇಂದ್ರಗಳಿಗೆ ಸಿಬ್ಬಂದಿಗಳ ನಿಯೋಜನೆಗೆ ಕುರಿತಂತೆ ಎರಡನೇ ಹಂತದ ರ್ಯಾಂಡಮೈಜೇಷನ್ (ಯಾದೃಚ್ಛಿಕ) ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಭಾನುವಾರ ಮತಗಟ್ಟೆಗಳಿಗೆ ಸಿಬ್ಬಂದಿ ನಿಯೋಜನೆ ಕುರಿತು ಎರಡನೇ ಹಂತದ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು, ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಒಟ್ಟು 1222 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 5815 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಎರಡು ಸಖಿ ಮತಗಟ್ಟೆ, ಒಂದು ವಿಶೇಷಚೇತನ ಮತಗಟ್ಟೆ, ಒಂದು ಯುವ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಿದ್ದು, ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ಕ್ಷೇತ್ರವಾರು ಮತಗಟ್ಟೆ ಕೇಂದ್ರಗಳಿಗೆ ಸಿಬ್ಬಂದಿ ನಿಯೋಜನೆ ವಿವರ: 91-ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ 1137 ಸಿಬ್ಬಂದಿ, 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ 1093 , 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ 1172, 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ 1226 ಮತ್ತು 95-ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ 1187 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ
ಎಂದರು. ಈ ಸಂದರ್ಭದಲ್ಲಿ ಚುನಾವಣಾ ಸಾಮಾನ್ಯ ವೀಕ್ಷಕರಾದ ವಿಜಯ್‍ಕುಮಾರ್.ಜೆ.ಜಯರಾಮ್, ರಾಜಮಣಿ, ಪಾಂಡ್ಯಾ, ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುವiರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಕಂಪ್ಲಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಡಾ.ನಯನ, ಸಿರುಗುಪ್ಪ ಕ್ಷೇತ್ರ ಚುನಾವಣಾಧಿಕಾರಿ ಸತೀಶ್, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಹೇಮಂತ್‍ಕುಮಾರ್.ಎನ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ರುದ್ರೇಶ್ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಶರಣಬಸವರಾಜ ಸೇರಿದಂತೆ ಚುನಾವಣಾ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ