ಬುಧವಾರ, ಏಪ್ರಿಲ್ 26, 2023
ಮೌಲಾನಾ ಆಜಾದ ಮಾದರಿ ಶಾಲೆ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಏ.26(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಗರದ ಮೌಲಾನಾ ಆಜಾದ್ ಮಾದರಿ ವಸತಿ ರಹಿತ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೂಚನೆಗಳು: ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ ಸೇರಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ 2ಎ, 3ಎ, 3ಬಿ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಆದಾಯದ ಮಿತಿ ರೂ.1 ಲಕ್ಷಕ್ಕೆ ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ ರೂ. 2.50 ಲಕ್ಷಕ್ಕೆ ಮೀರಿರಬಾರದು.
ಈ ಶಾಲೆಯು ವಸತಿ ರಹಿತವಾಗಿದ್ದು, 60 ಸೀಟ್‍ಗಳು ಲಭ್ಯವಿದೆ. ಮಧ್ಯಾಹ್ನದ ಬಿಸಿಯೂಟ, ಉಚಿತ ದಾಖಲಾತಿ, ಪಠ್ಯ ಪುಸ್ತಕ, ಲೇಖನ ಸಾಮಾಗ್ರಿ, ಸಮವಸ್ತ್ರ, ಬ್ಯಾಗ್ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು.
ಪ್ರವೇಶ ಬಯಸುವ ವಿದ್ಯಾರ್ಥಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಂಬಂಧಪಟ್ಟ ಆಯಾ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಹಾಗು ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದು.
ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮೇ 10 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಹಾಗೂ ದೂ.08392-200125/224, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಮೊ.8746818180, ಮೌಲಾನಾ ಆಜಾದ ಮಾದರಿ ಶಾಲೆಯ ಮುಖ್ಯೋಪಾಧ್ಯಾಯ ಶರಣಬಸವ ಅವರ ಮೊ.8861623814 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ