ಸೋಮವಾರ, ಏಪ್ರಿಲ್ 17, 2023

ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಒಟ್ಟು 76 ಪ್ರಕರಣ ದಾಖಲು* *10,93,937 ರೂ. ಮೌಲ್ಯದ 1892.88 ಲೀ. ಮದ್ಯ ವಶಕ್ಕೆ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ* ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿವೆ. ಜಿಲ್ಲೆಯಲ್ಲಿ ಭಾನುವಾರದಂದು, ಅಬಕಾರಿ ಇಲಾಖೆಯಿಂದ 10,51,046 ರೂ. ಮೌಲ್ಯದ 1789.96 ಲೀಟರ್ ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 42,891 ರೂ. ಮೌಲ್ಯದ 102.92 ಲೀಟರ್ ಮದ್ಯ ಸೇರಿ ಒಟ್ಟು 10,93,937 ರೂ. ಮೌಲ್ಯದ 1892.88 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಮತ್ತು ಇಲ್ಲಿಯವರೆಗೆ ಒಟ್ಟು 76 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ