ಶನಿವಾರ, ಏಪ್ರಿಲ್ 8, 2023

94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ: ದೂರು, ಮಾಹಿತಿ, ಸಾರ್ವಜನಿಕ ಕುಂದುಕೊರತೆಗಳಿದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಸಂಪರ್ಕಿಸಿ ಬಳ್ಳಾರಿ,ಏ.8(ಕರ್ನಾಟಕ ವಾರ್ತೆ): ರಾಜ್ಯ ಸಾರ್ವತ್ರಿಕ ವಿಧಾನಸಭಾ 2023ರ ಚುನಾವಣೆ ನಡೆಯುವ ಸಂಬಂಧ ಪ್ರಸ್ತುತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ಅನುಕೂಲಕ್ಕಾಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಂಟ್ರೋಲ್ ರೂಂನ್ನು ತೆರೆಯಲಾಗಿದೆ. 94-ಬಳ್ಳಾರಿ ನಗರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿ, ದೂರುಗಳು ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 08392-272356 ಗೆ ಕರೆ ಮಾಡಿ ತಿಳಿಸಬಹುದು. ಪಾರದರ್ಶಕ ರೀತಿಯಲ್ಲಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಸಾರ್ವಜನಿಕರು ಭಾಗಿಯಾಗಬೇಕಿದೆ ಎಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ