ಶನಿವಾರ, ಏಪ್ರಿಲ್ 15, 2023

ವ್ಯಕ್ತಿ ಕಾಣೆ ಬಳ್ಳಾರಿ, ಏ.15(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಬಿ.ಗೋನಾಳು ಗ್ರಾಮದ ಸಿಮೆಂಟ್ ಬೀದಿಯ 17 ನೇ ವಾರ್ಡ್‍ನ ರಾಜೇಂದ್ರ ಎನ್ನುವ 37 ವರ್ಷದ ವ್ಯಕ್ತಿಯು ಜ.10 ರಂದು ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.3 ಅಡಿ ಎತ್ತರ, ಕಪ್ಪು ಮೈ ಬಣ್ಣ, ದುಂಡು ಮುಖ, ದೃಢವಾದ ಮೈಕಟ್ಟು ಹೊಂದಿದ್ದು, ಸ್ವಲ್ಪ ಗಡ್ಡ ಬಿಟ್ಟಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಮಿಂಚಿನ ಚಿಕ್ಕ ಚಿಕ್ಕ ಗೆರೆಯುಳ್ಳ ಗೋಧಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಕಪ್ಪು ಬಣ್ಣದ ಬರ್ಮೋಡ ಧರಿಸಿರುತ್ತಾನೆ. ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಮಾಹಿತಿ ದೊರೆತಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.948080396, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ