ಸೋಮವಾರ, ಏಪ್ರಿಲ್ 10, 2023
ಕಂಪ್ಲಿ: ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಏ.12ರಂದು
ಬಳ್ಳಾರಿ,ಏ.10(ಕರ್ನಾಟಕ ವಾರ್ತೆ): ಬಳ್ಳಾರಿ ಲೋಕಾಯುಕ್ತ ವಿಭಾಗದಿಂದ ಕಂಪ್ಲಿ ವ್ಯಾಪ್ತಿಯಲ್ಲಿ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳ ವಿಲೇ ಮಾಡಿದೆ ಬಾಕಿ ಇಟ್ಟಿರುವ ಬಗ್ಗೆ ಏ.12 ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2 ರವರೆಗೆ ಕಂಪ್ಲಿ ತಾಲೂಕಿನ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ರಾಮರಾವ್ ಅವರು ತಿಳಿಸಿದ್ದಾರೆ.
ಕುಂದುಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ತಮ್ಮ ಅರ್ಜಿಗಳನ್ನು ನೀಡಬಹುದು ಎಂದು ಅವರು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ