ಬುಧವಾರ, ಏಪ್ರಿಲ್ 12, 2023

ಉಚಿತ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ ಬಳ್ಳಾರಿ,ಏ.12(ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ (ಅಃ ಖSಇಖಿI) ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 24 ರಿಂದ ತರಬೇತಿಗಳು ಆರಂಭವಾಗಲಿದ್ದು, 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಊಟ ವಸತಿಯೊಂದಿಗೆ ತರಬೇತಿಯು ಸಂಪೂರ್ಣ ಉಚಿತವಾಗಿರುತ್ತದೆ. ವಿದ್ಯಾರ್ಹತೆ ಕನಿಷ್ಟ 7ನೇ ತರಗತಿ ಪಾಸಾಗಿರಬೇಕು. ತರಬೇತಿಯ ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆ ಕೊಡಲಾಗುವದು. 35 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ವ-ವಿವರವುಳ್ಳ ಮಾಹಿತಿಯನ್ನು ಬಿಳಿ ಹಾಳೆ ಮೇಲೆ ಬರೆದು, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ರೇಷನ್ ಕಾರ್ಡ್‍ನ ಝೆರಾಕ್ಸ್ ಪ್ರತಿಯನ್ನು ಲಗತ್ತಿಸಿ ಅರ್ಜಿಯನ್ನು ಏಪ್ರಿಲ್ 20 ರೊಳಗೆ ಸಂಸ್ಥೆಗೆ ನೀಡಬೇಕು. ತರಬೇತಿಯಲ್ಲಿ ಪಾಲ್ಗೊಳ್ಳಲು ತಗುಲುವ ಪ್ರಯಾಣ ಭತ್ಯೆಯನ್ನು ತಾವೇ ಭರಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ ಡಿ.ಐ.ಸಿ ಕಾಂಪೌಂಡ್ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಅಃ ಖSಇಖಿI) ನಿರ್ದೇಶಕರ ಕಚೇರಿ ಅಥವಾ ಸಂಸ್ಥೆಯ ದೂ:08392-299117, ಮೊ.9663770207 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರಾದ ಪ್ರವೀಣ್ ಬಸವರಾಜು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ