ಸೋಮವಾರ, ಏಪ್ರಿಲ್ 10, 2023

ಪಿಂಚಣಿ ಅದಾಲತ್ ಏ.13ರಂದು ಬಳ್ಳಾರಿ,ಏ.10(ಕರ್ನಾಟಕ ವಾರ್ತೆ): ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ಪರಿಹರಿಸಲು ಏ.13 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿಯ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಗುವುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಏ.12ರೊಳಗೆ ತಿಳಿಸಬಹುದು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-226304ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ