ಸೋಮವಾರ, ಏಪ್ರಿಲ್ 17, 2023

ಪತ್ರಿಕಾ ಪ್ರಕಟಣೆ *ವಿಧಾನಸಭಾ ಸಾರ್ವತ್ರಿಕ ಚುನಾವಣೆ* *ಜಿಲ್ಲೆಯಲ್ಲಿ ಚೆಕ್‍ಪೋಸ್ಟ್ ಸಂಖ್ಯೆ ಹೆಚ್ಚಳ : ಕಟ್ಟುನಿಟ್ಟಿನ ನಿಗಾ* ಬಳ್ಳಾರಿ, ಏ. 17 (ಕರ್ನಾಟಕ ವಾರ್ತೆ): ಪ್ರಸಕ್ತ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಿ ನ್ಯಾಯಸಮ್ಮತ ಚುನಾವಣೆ ನಡೆಸಲು ಅನುವಾಗುವಂತೆ ಜಿಲ್ಲೆಯಲ್ಲಿ ಚೆಕ್‍ಪೋಸ್ಟ್‍ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದೀಗ ಜಿಲ್ಲೆಯಲ್ಲಿ ಒಟ್ಟು 27 ಚೆಕ್‍ಪೋಸ್ಟ್‍ಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ 24 ಚೆಕ್‍ಪೋಸ್ಟ್ ಸ್ಥಾಪಿಸಲಾಗಿತ್ತು, ಇದೀಗ ಇನ್ನೂ 03 ಚೆಕ್‍ಪೋಸ್ಟ್‍ಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಿದ್ದು, ಎಲ್ಲ ಚೆಕ್‍ಪೋಸ್ಟ್‍ಗಳಿಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ, ನಿಗಾ ವಹಿಸಲಾಗುತ್ತಿದೆ, ಅಲ್ಲದೆ ನೇರ ದೃಶ್ಯಾವಳಿ ಸೆರಿಹಿಡಿಯಲಾಗುತ್ತಿದೆ. ಮತದಾರರಿಗೆ ಆಮಿಷ ಒಡ್ಡಲು ಮತ್ತು ಅನಧಿಕೃತವಾಗಿ ವಸ್ತುಗಳನ್ನು ನೀಡುವುದು. ದಾಖಲೆಯಿಲ್ಲದ ಹಣವನ್ನು ಸಾಗಾಣೆ ಮಾಡುವುದು ಸೇರಿದಂತೆ ಆಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೇ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಹದ್ದಿನ ಕಣ್ಣಿಡಲಾಗಿದೆ. ಬಳ್ಳಾರಿ ಜಿಲ್ಲೆ ಅಂತರ್‍ರಾಜ್ಯ ಗಡಿ ಪ್ರದೇಶ ಹೊಂದಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ತೀವ್ರ ಬಿಗಿಯಾದ ಕ್ರಮವನ್ನು ಕೈಗೊಂಡಿದೆ ಅಲ್ಲದೇ, ಎಚ್ಚರಿಕೆಯನ್ನು ವಹಿಸಲಾಗಿದೆ. ಚುನಾವಣೆ ಅಕ್ರಮಗಳ ಮೇಲೆ ಕಣ್ಗಾವಲು ಇಡಲು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಅಲ್ಲಿ ವಿವಿಧ ತಂಡಗಳನ್ನು ನೇಮಿಸಲಾಗಿದೆ. ಇಲ್ಲಿನ ಕಾರ್ಯಚಟುವಟಿಕೆಗಳ ನೇರ ದೃಶ್ಯಾವಳಿಗಳನ್ನು ಸೆರೆಹಿಡಿಯಲು ಸಿಸಿ ಕ್ಯಾಮೆರಾ ಆಳವಡಿಸಿ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ವೀಕ್ಷಣೆ ಮಾಡುವುದು ಆಪ್ ಮೂಲಕವೂ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು, ಎಂಸಿಸಿ ತಂಡದ ಮುಖ್ಯಸ್ಥರು ವೀಕ್ಷಣೆ ಮಾಡಲಿದ್ದಾರೆ. ಜಿಲ್ಲೆಯೊಳಗಡೆ 09, ಅಂತರ್‍ಜಿಲ್ಲೆ ಗಡಿಯಲ್ಲಿ 05 ಮತ್ತು ಅಂತರರಾಜ್ಯ ಆಂಧ್ರಪ್ರದೇಶ ಗಡಿಭಾಗದಲ್ಲಿ 13 ಸೇರಿದಂತೆ ಒಟ್ಟು 27 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 5 ಕ್ಷೇತ್ರದಲ್ಲಿ 27 ಚೆಕ್‍ಪೋಸ್ಟ್ ಸ್ಥಾಪನೆ: ಜಿಲ್ಲೆಯಲ್ಲಿ ಒಟ್ಟು 5 ಮತಕ್ಷೇತ್ರಗಳಿಗೆ ಜಿಲ್ಲೆಯಾದ್ಯಂತ ಒಟ್ಟು 27 ಚೆಕ್‍ಪೆÇೀಸ್ಟ್ ಸ್ಥಾಪಿಸಲಾಗಿದೆ. ಪ್ರತಿ ಚೆಕ್‍ಪೆÇೀಸ್ಟ್‍ನಲ್ಲಿ 3 ಎಸ್‍ಎಸ್‍ಟಿ ಅಧಿಕಾರಿಗಳು ಹಾಗೂ ಪೆÇಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವ್ಯಾಡ್ ಮತ್ತು ವಿಡಿಯೋ ಕಣ್ಗಾವಲು ತಂಡಗಳನ್ನು ನೇಮಕ ಮಾಡಲಾಗಿದೆ. ಕ್ಷೇತ್ರವಾರು ಚೆಕ್‍ಪೋಸ್ಟ್ ಸ್ಥಾಪನೆ: *ಕಂಪ್ಲಿ ವಿಧಾನಸಭಾ ಕ್ಷೇತ್ರ : ಕಂಪ್ಲಿ ಕ್ಷೇತ್ರದಲ್ಲಿ 03 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಅಂತರ್‍ಜಿಲ್ಲೆ ಕೊಪ್ಪಳ ಗಡಿಭಾಗದಲ್ಲಿ ಕಂಪ್ಲಿ ಸೇತುವೆ ಬಳಿ ಮತ್ತು ವಿಜಯನಗರ ಜಿಲ್ಲೆ ಗಡಿಭಾಗದ ದೇವಲಾಪುರ - ಉಪ್ಪಾರಹಳ್ಳಿ ವೃತ್ತದಲ್ಲಿ ಹಾಗೂ ರಾಮಸಾಗರದಲ್ಲಿ ಚೆಕ್‍ಪೋಸ್ಟ್ ಸ್ಥಾಪನೆ ಮಾಡಲಾಗಿದೆ. *ಸಿರುಗುಪ್ಪ ವಿಧಾನಸಭಾ ಕ್ಷೇತ್ರ: ಸಿರುಗುಪ್ಪ ಕ್ಷೇತ್ರದಲ್ಲಿ 05 ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗಿದ್ದು, ಅಂತರ್‍ಜಿಲ್ಲೆ ರಾಯಚೂರು ಗಡಿಭಾಗದ ಇಬ್ರಾಹಿಂಪುರ-ಇಬ್ರಾಹಿಂಪುರ ಗ್ರಾಮ, ಅಂತರ್‍ರಾಜ್ಯ ಗಡಿಭಾಗದ ಇಟ್ಟಿಗೆಹಾಳ್, ವಟ್ಟುಮುರುವಾಣಿ, ಮಾಟಸೂಗೂರು ಹಾಗೂ ಕೆ.ಬೆಳಗಲ್ ಗ್ರಾಮಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. * ಬಳ್ಳಾರಿ ಗ್ರಾಮೀಣ ಕ್ಷೇತ್ರ : ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ಅಂತರ್‍ರಾಜ್ಯ ಆಂಧ್ರಪ್ರದೇಶ ಗಡಿಭಾಗದ ಹಲಕುಂದಿಕ್ರಾಸ್, ಎತ್ತಿನ ಬೂದಿಹಾಳ್ ಕ್ರಾಸ್, ರೂಪನಗುಡಿ ಕ್ರಾಸ್, ಜೋಳದರಾಶಿ ಗ್ರಾಮ, ಕಾರೇಕಲ್ಲು ಗ್ರಾಮ, ಸಿಂಧವಾಳ ಹಾಗೂ ಬೊಮ್ಮನಾಳ್ ಗ್ರಾಮ ಒಳಗೊಂಡಂತೆ 07 ಕಡೆ ಹಾಗೂ ಅಲ್ಲಿಪುರದಲ್ಲಿ 01 ಸೇರಿದಂತೆ ಒಟ್ಟು 08 ಚೆಕ್ ಪೆÇೀಸ್ಟ್‍ಗಳನ್ನು ಸ್ಥಾಪಿಸಲಾಗಿದೆ. * ಬಳ್ಳಾರಿ ನಗರ ಕ್ಷೇತ್ರ : ನಗರದಲ್ಲಿ ಕೊಳಗಲ್ ರಸ್ತೆಯ ವಿಮಾನನಿಲ್ದಾಣ ವೃತ್ತ, ಕಾಣೆಕಲ್ ರಸ್ತೆಯ ಆಂಧ್ರಾಳ್ ಬೈಪಾಸ್ ಹತ್ತಿರ, ಮೋಕಾ ರಸ್ತೆಯ ಕೆಇಬಿ ವೃತ್ತ ಹತ್ತಿರ, ತಾಳೂರು ರಸ್ತೆಯ ಮಹಾನಂದಿ ಕೊಟ್ಟಂ ಹತ್ತಿರ, ರೂಪನಗುಡಿ ರಸ್ತೆಯ ದುರ್ಗ ವೃತ್ತದ ಹತ್ತಿರ, ಸಿರುಗುಪ್ಪ ರಸ್ತೆಯ ಕ್ಲಾಸಿಕ್ ಫಂಕ್ಷನ್ ಹಾಲ್ ಹತ್ತಿರ, ಅನಂತಪುರ ರಸ್ತೆಯ ಬೈಪಾಸ್ ವೃತ್ತದ ಹತ್ತಿರ ಸೇರಿ 07 ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. * ಸಂಡೂರು ಕ್ಷೇತ್ರ 4: ಸಂಡೂರು ಕ್ಷೇತ್ರ ವ್ಯಾಪ್ತಿಯ್ಲಲಿ ಜಿಂದಾಲ್‍ನ ವಿದ್ಯಾನಗರ ವಿಮಾನ ನಿಲ್ದಾಣ ಹತ್ತಿರ, ಅಂತರ್‍ಜಿಲ್ಲೆಯಾದ ಚಿತ್ರದುರ್ಗ ಗಡಿಭಾಗದ ಮೊಟಲಕುಂಟ ಹತ್ತಿರ ಮತ್ತು ಅಂತರ್‍ರಾಜ್ಯ ಆಂಧ್ರಪ್ರದೇಶ ಗಡಿಭಾಗದ ದಿಕ್ಕಲದಿನ್ನಿ, ಜಿ.ಬಸಾಪುರ ಗ್ರಾಮಗಳಲ್ಲಿ 4 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ. ವಿವಿಧ ತಂಡಗಳ ನೇಮಕ : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಂದ ಜರುಗುವ ವಿವಿಧ ಸಭೆ, ಸಮಾರಂಭ ಹಾಗೂ ಹಲವು ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲು ಜಿಲ್ಲೆಯಲ್ಲಿ ಒಟ್ಟು 22 ವಿಡಿಯೋ ಸರ್ವೇಲೆನ್ಸ್ ತಂಡಗಳನ್ನು ರಚಿಸಲಾಗಿದೆ. ಕಂಪ್ಲಿ ಕ್ಷೇತ್ರಕ್ಕೆ 05, ಸಿರಗುಪ್ಪ-04, ಬಳ್ಳಾರಿ ಗ್ರಾಮೀಣ-05, ಬಳ್ಳಾರಿ ನಗರ-05 ಹಾಗೂ ಸಂಡೂರು ಕ್ಷೇತ್ರದಲ್ಲಿ 03 ಸೇರಿದಂತೆ ಒಟ್ಟು 22 ವಿ.ಎಸ್.ಟಿ. ತಂಡಗಳನ್ನು ನೇಮಿಸಲಾಗಿದೆ. ಚುನಾವಣಾ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲು ಜಿಲ್ಲೆಯಲ್ಲಿ ಒಟ್ಟು 17 ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ನೇಮಿಸಲಾಗಿದೆ. ಪ್ರತಿ ತಂಡದಲ್ಲಿ ಒಟ್ಟು ಮೂವರು ಅಧಿಕಾರಿಗಳಿದ್ದು, ದಿನದ 24 ಗಂಟೆಗಳೂ ಸರದಿಯಂತೆ ಕಾರ್ಯ ನಿರ್ವಹಿಸುವ ಸಲುವಾಗಿ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಕಂಪ್ಲಿ ಕ್ಷೇತ್ರದಲ್ಲಿ 02, ಸಿರಗುಪ್ಪ-06, ಬಳ್ಳಾರಿ ಗ್ರಾಮೀಣ-03, ಬಳ್ಳಾರಿ ನಗರ-03 ಹಾಗೂ ಸಂಡೂರು ಕ್ಷೇತ್ರದಲ್ಲಿ 03 ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ ಜಿಲ್ಲೆಯಲ್ಲಿ ಒಟ್ಟು 27 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳನ್ನು ನೇಮಿಸಲಾಗಿದ್ದು, ಕಂಪ್ಲಿ ಕ್ಷೇತ್ರದಲ್ಲಿ 03, ಸಿರಗುಪ್ಪ-05, ಬಳ್ಳಾರಿ ಗ್ರಾಮೀಣ-08, ಬಳ್ಳಾರಿ ನಗರ-07 ಹಾಗೂ ಸಂಡೂರು ಕ್ಷೇತ್ರದಲ್ಲಿ 04 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡವನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಿ, ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸುಗಮ ಚುನಾವಣೆ ಜರುಗಿಸಲು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ