ಮಂಗಳವಾರ, ಏಪ್ರಿಲ್ 18, 2023

ಸಂಜೀವರಾಯನಕೋಟೆ ಗ್ರಾಮದಲ್ಲಿ ಮತದಾನ ಜಾಗೃತಿ ತಪ್ಪದೇ ಎಲ್ಲರೂ ಮತದಾನ ಮಾಡಿ: ತಾಪಂ ಇಒ ಶ್ರೀಧರ್ ಬಾರಕೇರ್ ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10 ರಂದು ನಡೆಯುವ ಮತದಾನ ದಿನದಂದು ಎಲ್ಲರೂ ಕಡ್ಡಾಯವಾಗಿ ತಪ್ಪದೇ ಮತ ಚಲಾಯಿಸುವಂತೆ ತಾಲ್ಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಕೇರ್ ಅವರು ಕೂಲಿಕಾರರಿಗೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಪಂಚಾಯತ್ ಇವರ ಸಹಯೋಗದಲ್ಲಿ ಮಂಗಳವಾರ ತಾಲೂಕಿನ ಸಂಜೀವರಾಯನ ಕೋಟೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಾಲಾ ಹೂಳು ತೆಗೆಯುವ ಕಾಮಗಾರಿಯ ಸ್ಥಳದಲ್ಲಿ ಕೂಲಿಕಾರರಿಗೆ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಳ್ಳಾರಿ ತಾಲೂಕಿನಲ್ಲಿ ಒಟ್ಟು 1,090 ವಿಶೇಷ ಚೇತನರಿದ್ದು, ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಚೇತನರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನೀಡಲು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಸಂಜೀವರಾಯನ ಕೋಟೆ ಗ್ರಾಮ ಪಂಚಾಯತಿಯಲ್ಲಿ 26 ವಿಶೇಷ ಚೇತನರಿದ್ದು, 16 ಜನರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನೀಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವವನ್ನು ಅರಿಯಲು ಸ್ವೀಪ್ ಚಟುವಟಿಕೆಯಡಿ ಮತದಾರರ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಈ ವೇಳೆ ಟಿಸಿ, ಟಿಐಇಸಿ, ಪಿಡಿಓ, ಟಿಎ, ಗ್ರಾಮ ಕಾಯಕ ಮಿತ್ರರು ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ