ಸೋಮವಾರ, ಏಪ್ರಿಲ್ 10, 2023
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಏ.11ರಂದು
ಬಳ್ಳಾರಿ,ಏ.10(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಮೋಕಾ ಉಪ-ಕೇಂದ್ರದಿಂದ ಹೊರಡುವ ಎರಡು 11ಕೆ.ವಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಏ.11 ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು: ಎಫ್-15 ಫೀಡರ್ ಮೋಕ ಮತ್ತು ಸೋಲಾರ್ ಮಾರ್ಗದ ಮೋಕ ಮತ್ತು ಬಿ.ಡಿ ಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ