ಶನಿವಾರ, ಏಪ್ರಿಲ್ 29, 2023

ಭದ್ರಾದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ; ನದಿ ಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ ಬಳ್ಳಾರಿ,ಏ.29(ಕರ್ನಾಟಕ ವಾರ್ತೆ): ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಿರುವ ಕಾರಣ, ನದಿ ಪಾತ್ರದಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕಾ ಸಂಬಂಧಿಸಿದ ಕೆಲಸಗಳನ್ನು ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗಲ್ಲದೇ ನದಿ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಈಗಾಗಲೇ ಪ್ರತಿದಿನ ಸಂಜೆ 06 ರಿಂದ ಮೇ 09 ರ ಬೆಳಗ್ಗೆ 06 ರವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್‍ನಂತೆ ಒಟ್ಟು 11574 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುತ್ತಿದೆ. ಆದ್ದರಿಂದ ನದಿ ಪಾತ್ರದಲ್ಲಿ ಪ್ರಗಗತಿಯಲ್ಲಿರುವ ಕಾಮಗಾರಿಗಳನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದನ್ನು, ದನಕರುಗಳನ್ನು ಮೇಯಿಸುವುದು ಬಗ್ಗೆ ಎಚ್ಚರಿಕೆ ವಹಿಸಬೇಕು. ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು, ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿμÉೀಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎನ್.ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ