ಸೋಮವಾರ, ಏಪ್ರಿಲ್ 17, 2023

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಏ.18ರಂದು ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಬರುವ ಎಲ್ಲಾ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಕುಂದು ಕೊರತೆಗಳನ್ನು ಬಗೆಹರಿಸಲು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಏ.18 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಎತ್ತಿನ ಬೂದಿಹಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಸಲಾಗುವುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಭಾಯಿ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ