ಮಂಗಳವಾರ, ಏಪ್ರಿಲ್ 11, 2023

ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಏ.14ರಂದು ಬಳ್ಳಾರಿ,ಏ.11(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿಯನ್ನು ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ನಗರದ ಕೌಲ್‍ಬಜಾರ್ ಮೊದಲನೇ ಗೇಟ್ ಹತ್ತಿರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏ.14 ರಂದು ಬೆಳಗ್ಗೆ 8 ಕ್ಕೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಅಧಿಕಾರಿ ವೃಂದದವರು ಉಪಸ್ಥಿತರಿಲಿದ್ದಾರೆ. ಸಮಾಜದ ಮುಖಂಡರು, ಸರ್ವ ಜನಾಂಗದವರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಕಜನಿಕರು ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಾಷು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ