ಮಂಗಳವಾರ, ಏಪ್ರಿಲ್ 18, 2023
ಜಿಲ್ಲಾ ಸ್ವೀಪ್ ಸಮಿತಿಯಿಂದ ಜೆಎಸ್‍ಡಬ್ಲ್ಯೂ ಟೌನ್‍ಶಿಪ್‍ನಲ್ಲಿ ಮತದಾನ ಜಾಗೃತಿ
ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಮತದಾನ ಮಾಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು
ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸಂಸ್ಥೆಯ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಆಡಳಿತ ಹಾಗೂ ಜೆಎಸ್‍ಡಬ್ಲ್ಯೂ ಸಹಯೋಗದಲ್ಲಿ ತೋರಣಗಲ್ಲಿನ ಜೆಎಸ್‍ಡಬ್ಲ್ಯೂನ ವಿದ್ಯಾನಗರ ಟೌನ್‍ಶಿಪ್‍ನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಹಾಗೂ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತವು ವಿಶೇಷ ಒತ್ತು ನೀಡಲಾಗುತ್ತಿದೆ. ಆದ್ದರಿಂದ ಜೆಎಸ್‍ಡಬ್ಲ್ಯೂ ಸಂಸ್ಥೆಯ ನೌಕರರರು ಮತ್ತು ಸಿಬ್ಬಂದಿಗಳು ಮತದಾನ ದಿನದಂದು ಯಾರೂ ಹೊರಗುಳಿಯಬಾರದು, ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ನೌಕರರಿಗೆ ಮತದಾನ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಕಾರ್ಯಕ್ರಮದಲ್ಲಿ ಜೆಎಸ್‍ಡಬ್ಲ್ಯೂ ಸಂಸ್ಥೆಯ ನೌಕರರ ಸಿಬ್ಬಂದಿಗಳಿಗೆ ಚಿಗುರು ಕಲಾ ತಂಡ ಮತ್ತು ಸನ್ಮಾರ್ಗ ಗೆಳೆಯರ ಬಳಗದಿಂದ ನಾಟಕ ಹಾಗೂ ಜಾಗೃತಿ ಗೀತೆಗಳನ್ನು ಹಾಡುವುದರ ಮೂಲಕ ಮತದಾನದ ಜಾಗೃತಿ (ಅರಿವು) ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಮೋದ್, ಜೆಎಸ್‍ಡಬ್ಲ್ಯೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ