ಶುಕ್ರವಾರ, ಏಪ್ರಿಲ್ 14, 2023
ಜಿಲ್ಲಾಡಳಿತದಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಬಳ್ಳಾರಿ,ಏ.14(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ನಗರದ ಕೌಲ್‍ಬಜಾರ್ ಮೊದಲನೇ ಗೇಟ್ ಹತ್ತಿರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ನಟರಾಜ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಕೀನಾ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಮಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಾಷು ಸೇರಿದಂತೆ ಸಮಾಜ ಮುಖಂಡರುಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ