ಗುರುವಾರ, ಏಪ್ರಿಲ್ 13, 2023

ಅನಾಮಧೇಯ ವ್ಯಕ್ತಿ ಮೃತ: ವಾರಸುದಾರರ ಪತ್ತಗೆ ಮನವಿ ಬಳ್ಳಾರಿ,ಏ.13(ಕರ್ನಾಟಕ ವಾರ್ತೆ): ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಸ್‍ಎಸ್‍ಐಡಿಸಿ ಕೈಗಾರಿಕಾ ಪ್ರದೇಶದಲ್ಲಿ ಏ.12 ರಂದು ಸುಮಾರು 55 ರಿಂದ 60 ವರ್ಷದ ಅನಾಮಧೇಯ ವ್ಯಕ್ತಿಯು ಸಾವನ್ನಪ್ಪಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.4 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತ ಕೂದಲು ಇರುತ್ತವೆ. ಕಂದು ಬಣ್ಣದ ಆಫ್ ಟೀ ಶರ್ಟ್ ಮತ್ತು ಬಿಳಿ ಬಣ್ಣದ ಆಫ್ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ದೂ.08392-250033, ಠಾಣೆಯ ಪಿಎಸ್‍ಐ ಮೊ.8073935299, ಪಿಐ ಮೊ.9480803096, ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದಾಗಿದೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ