ಶನಿವಾರ, ಏಪ್ರಿಲ್ 15, 2023
ವಿಧಾನಸಭಾ ಚುನಾವಣೆ : ಜಿಲ್ಲಾ ಸ್ವೀಪ್ ಸಮಿತಿಯಿಂದ ಏ.16ರಂದು ಮ್ಯಾರಥಾನ್ ಓಟ*
ಬಳ್ಳಾರಿ,ಏ.15(ಕರ್ನಾಟಕ ವಾರ್ತೆ):
ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಏ.16 ರಂದು ಬೆಳಗ್ಗೆ 6 ಕ್ಕೆ ನಗರದ ವಿಮ್ಸ್ ಮೈದಾನದಿಂದ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡಲು ಹಾಗೂ ಮತದಾರರಲ್ಲಿ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಸ್ವೀಪ್ ಸಮಿತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಏ. 16 ರಂದು ಬಳ್ಳಾರಿ ನಗರದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮ್ಯಾರಾಥಾನ್ ಓಟವು ವಿಮ್ಸ್ ಮೈದಾನದಿಂದ ಬೆ. 06 ಕ್ಕೆ ಆರಂಭವಾಗಿ ಸುಧಾ ಕ್ರಾಸ್‍ನಿಂದ ಇನ್‍ಫ್ಯಾಂಟ್ರಿ ರಸ್ತೆ ಮೂಲಕ ಅಗ್ನಿಶಾಮಕ ದಳ ಕಚೇರಿ, ಎಸ್‍ಪಿ ಸರ್ಕಲ್ ಮಾರ್ಗವಾಗಿ ದುರ್ಗಮ್ಮ ಗುಡಿ, ರಾಯಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ