ಶುಕ್ರವಾರ, ಏಪ್ರಿಲ್ 14, 2023
*ಚುನಾವಣಾ ವೆಚ್ಚ ವೀಕ್ಷಕರಿಂದ ಕಂಟ್ರೋಲ್ ರೂಂ, ಎಂಸಿಎಂಸಿ ಸಮಿತಿಗೆ ಭೇಟಿ ಪರಿಶೀಲನೆ*
ಬಳ್ಳಾರಿ,ಏ.14(ಕರ್ನಾಟಕ ವಾರ್ತೆ): ಸಾರ್ವತ್ರಿಕ ವಿಧಾನಸಭಾ ಚುನಾವಣೆ ಅಂಗವಾಗಿ ಯಾವುದೇ ಅಕ್ರಮ ಅವ್ಯವಹಾರ ನಡೆಯದಂತೆ ನೋಡಿಕೊಳ್ಳಲು ಜಿಲ್ಲಾ ಚುನಾವಣಾ ಆಯೋಗವು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ರಾವುತ್ ಮನೀಶ್ ಮಹೇಂದ್ರ, ಯುಧಸ್ತ್ ಕುಮಾರ್ ಮತ್ತು ಅನಿಸ್ ಖಾನ್ ಅವರನ್ನು ನೇಮಿಸಿದೆ.
ಅವರು ಶುಕ್ರವಾರ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಚುನಾವಣಾ ಸಂಬಂಧಿತ ಕುಂದುಕೊರತೆ ಹಾಗೂ ಇತರೆ ಮಾಹಿತಿ ನೀಡಲು ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕಂಟ್ರೋಲ್ ರೂಂಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಸಿಎಂಸಿ ಸಮಿತಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜೀತ್‍ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್‍ಕುಮಾರ್.ಎನ್ ಅವರು ಸೇರಿದಂತೆ ಚುನಾವಣಾ ಸಿಬ್ಬಂದಿಗಳು ಇದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ