ಮಂಗಳವಾರ, ಏಪ್ರಿಲ್ 25, 2023
ಸಿರುಗುಪ್ಪ ವಿಧಾನಸಭಾ ಚುನಾವಣೆ:
ಚುನಾವಣಾ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಗೆ ದಿನ ನಿಗದಿ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳ ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಲು ಚುನಾವಣಾ ಆಯೋಗದ ನಿರ್ದೇಶನವಿದ್ದು, ಇದಕ್ಕಾಗಿ ದಿನ ನಿಗದಿಪಡಿಸಲಾಗಿದೆ.
*ನಿಗದಿಪಡಿಸಿದ ದಿನ ವಿವರ:* ಮೊದಲನೇ ಪರಿಶೀಲನೆಯು ಏ.29 ರಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ, ಎರಡನೇ ಪರಿಶೀಲನೆಯು ಮೇ 3 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಹಾಗೂ ಮೂರನೇ ಪರಿಶೀಲನೆಯು ಮೇ 7 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಅನಂತಪುರ ರಸ್ತೆಯ ಲೋಕೋಪಯೋಗಿ ಇಲಾಖೆಯ ನೂತನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆಸಲಾಗುವುದು ಎಂದು 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ