ಶನಿವಾರ, ಏಪ್ರಿಲ್ 15, 2023

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಾಮಾಜಿಕ ಜಾಲತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಲು ಸೋಷಿಯಲ್ ಮೀಡಿಯಾ ಸೆಲ್ ಕಾರ್ಯ ಪ್ರವೃತ್ತಿ ಬಳ್ಳಾರಿ,ಏ.15(ಕರ್ನಾಟಕ ವಾರ್ತೆ): ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಹಾಗೂ ಪೇಯ್ಡ್ ನ್ಯೂಸ್‍ಗಳ ಮೇಲೆ ನಿಗಾ ವಹಿಸಲು ಈಗಾಗಲೇ ಜಿಲ್ಲೆಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ತಂಡವು ಕಾರ್ಯ ನಿರ್ವಹಿಸುತ್ತಿದೆ. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು, ಎಂಸಿಎಂಸಿ ಪೂರ್ವಾನುಮತಿಯಿಲ್ಲದೇ ಚುನಾವಣಾ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಾಮರಸ್ಯ ಕದಡುವಂತಹ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ್‍ಗಳು ಕಂಡುಬಂದಲ್ಲಿ, ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಜಿಲ್ಲಾ ಚುನಾವಣೆ ನಿಯಂತ್ರಣ ಕೊಠಡಿಯ ಸಿವಿಜಲ್ ಮಾನಿಟರಿಂಗ್ ಸೆಲ್ ಅಥವಾ ballarisocialmedia@gmail.com ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ಸೋಷಿಯಲ್ ಮೀಡಿಯಾ ಸೆಲ್‍ನ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಂಜನಪ್ಪ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ