ಗುರುವಾರ, ಏಪ್ರಿಲ್ 13, 2023

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಬಳ್ಳಾರಿ,ಏ.13(ಕರ್ನಾಟಕ ವಾರ್ತೆ): ಧಾರವಾಡದ ಶಹಪುರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ 2023-24 ಶೈಕ್ಷಣಿಕ ಸಾಲಿಗೆ ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಮೆಟ್ರಿಕ್ ಪೂರ್ವ 5 ನೇ ತರಗತಿಯಿಂದ 10ನೇ ತರಗತಿಯವರಿಗೆ ಹಾಗೂ ಮೆಟ್ರಿಕ್ ನಂತರ ಪಿಯುಸಿ ಹಾಗೂ ಅರ್ಹತೆ ಮೇರೆಗೆ ವಸತಿ ನಿಲಯದಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 1 ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿನಿರ್ದೇಶಕರ ಕಚೇರಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ